ಉಡುಪಿ, ನ.30: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಉಡುಪಿ ಜಿಲ್ಲಾ ಶ್ರೀ ಕನಕದಾಸ ಸಮಾಜ ಸಂಘ(ರಿ) ಉಡುಪಿ ಇವರ ಸಹಯೋಗದಲ್ಲಿ ಶ್ರೀ ಕನಕದಾಸರ 536 ನೇ ಜಯಂತಿ ಮಹೋತ್ಸವ ನಡೆಯಿತು. ಸಭಾ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿ ಪಾಳೇಗಾರರಾಗಿದ್ದ ತಿಮ್ಮಪ್ಪ ನಾಯಕ ಲೌಕಿಕ ಸುಖಗಳನ್ನು ತೊರೆದು ದೇವರ ದಾಸರಾಗಿ ದಾಸ ಸಾಹಿತ್ಯಕ್ಕೆ ಅತ್ಯುತ್ತಮ ಕೊಡುಗೆ ನೀಡಿದ ತತ್ವಜ್ಞಾನಿ ಶ್ರೀಕನಕದಾಸರು. ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದು ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿಯ ಶ್ರೀಕೃಷ್ಣನ ಭಕ್ತರು ಎಂದು ಅನುಗ್ರಹ ಸಂದೇಶ ನೀಡಿದರು. ಸಭೆಯಲ್ಲಿ ಸಮಾಜದ ವಿವಿಧ ಮುಖಂಡರು ಉಪಸ್ಥಿತರಿದ್ದರು.
ಉಡುಪಿ ಶ್ರೀ ಕೃಷ್ಣಮಠದಲ್ಲಿ ಕನಕದಾಸ ಜಯಂತಿ

ಉಡುಪಿ ಶ್ರೀ ಕೃಷ್ಣಮಠದಲ್ಲಿ ಕನಕದಾಸ ಜಯಂತಿ
Date: