Wednesday, January 22, 2025
Wednesday, January 22, 2025

‘ದರ್ಶನ’ ಕಾಲೇಜು ಸಂಚಿಕೆ ಬಿಡುಗಡೆ

‘ದರ್ಶನ’ ಕಾಲೇಜು ಸಂಚಿಕೆ ಬಿಡುಗಡೆ

Date:

ಉಡುಪಿ, ಡಿ.4: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 2022-23ನೇ ಸಾಲಿನ ಕಾಲೇಜಿನ ವಾರ್ಷಿಕ ಸಂಚಿಕೆ ‘ದರ್ಶನ’ವನ್ನು ಲಯನ್ಸ್ ಕ್ಲಬ್ ಅಮೃತ್ ಉಡುಪಿ ಇವರ ಸಹಯೋಗದಲ್ಲಿ ಅಮೃತ ಗಾರ್ಡನ್ ಅಂಬಾಗಿಲು ಇಲ್ಲಿ ಉಡುಪಿ ಶಾಸಕರಾದ ಯಶಪಾಲ್ ಎ. ಸುವರ್ಣ ಅವರು ಬಿಡುಗಡೆಗೊಳಿಸಿದರು. ಯುವ ಮನಸ್ಸುಗಳು ಸೃಜನಾತ್ಮಕವಾಗಿ ಹಾಗೂ ರಚನಾತ್ಮಕವಾಗಿ ಆಲೋಚಿಸುವಂತೆ ಮಾಡುವಲ್ಲಿ ಉನ್ನತ ಶಿಕ್ಷಣದ ಪಾತ್ರ ಮಹತ್ವದ್ದು. ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸ್ಸನ್ನು ನನಸಾಗಿಸುತ್ತಾ ಬಂದಿದೆ ಎಂದು ಶಾಸಕರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ.ಕೆ ಕಾಲೇಜು ವಾರ್ಷಿಕ ವಿಶೇಷಾಂಕ ದರ್ಶನವನ್ನು ಹೊರತರುವಲ್ಲಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರೋತ್ಸಾಹಕರಾದ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಅಧ್ಯಕ್ಷರಾದ ಭಾರತಿ ಹೆಚ್.ಎಸ್., ಉದ್ಯಮಿಗಳಾದ ಎಂ.ಸಿ ಚಂದ್ರಶೇಖರ್ ಹಾಗೂ ಪಿ.ಹೆಚ್.ಡಿ ಪದವಿ ಗಳಿಸಿದ ಆಂಗ್ಲಭಾಷಾ ಸಹ ಪ್ರಾಧ್ಯಾಪಕರಾದ ಡಾ. ಶ್ರೀಧರ ಭಟ್ ಇವರನ್ನು ಗೌರವಿಸಲಾಯಿತು.

ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣ ಎಂ ಗಾಂವಕರ್, ದರ್ಶನದ ಸಂಪಾದಕರಾದ ಕೃಷ್ಣ ಸಾಸ್ತಾನ, ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ರಾಧಕೃಷ್ಣ, ಡಾ. ರಾಘವ ನಾಯ್ಕ್ , ಐ.ಕ್ಯೂ.ಎ.ಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಸಾಂಸ್ಕೃತಿಕ ಸಮಿತಿ ಸಂಚಾಲಕರಾದ ರತ್ನಮಾಲಾ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು. ಸಮಾಜಕಾರ್ಯ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್, ಕನ್ನಡ ಸ್ನಾತಕೋತ್ತರ ವಿದ್ಯಾರ್ಥಿ ಪ್ರಕಾಶ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ್ಞಾನಸುಧಾ: ಕಂಪೆನಿ ಸೆಕ್ರೇಟರಿ ಸಾಧಕರಿಗೆ ಸನ್ಮಾನ

ಕಾರ್ಕಳ, ಜ.22: ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು...

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...
error: Content is protected !!