ಉಡುಪಿ: ರಾಜ್ಯ ಮಟ್ಟದಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ ಮತ್ತು ಯೋಜನೆಗಳ ಕುರಿತಂತೆ ಎಲ್ಇಡಿ ಸಂಚಾರಿ ವಾಹನದ ಮೂಲಕ ಪ್ರಚಾರ ಕಾರ್ಯ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉಡುಪಿ ಜಿಲ್ಲೆಯ 15 ಗ್ರಾಮಗಳಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕುಂದಾಪುರದ ತಾಲೂಕು ಪಂಚಾಯಿತಿಯ ಮಾಜಿ ಅಧ್ಯಕ್ಷ ಭಾಸ್ಕರ ಬಿಲ್ಲವ ಇಂದು ಕಾರ್ಯಕ್ರಮವನ್ನು ಉದ್ಘಾಟಿಸಿ, ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಹೆಚ್, ತಾಲೂಕು ಆರೋಗ್ಯಾಧಿಕಾರಿ ಡಾ.ರಾಜೇಶ್ವರಿ, ಉಡುಪಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.