Thursday, January 23, 2025
Thursday, January 23, 2025

ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲಾ ವಾರ್ಷಿಕೋತ್ಸವ

ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲಾ ವಾರ್ಷಿಕೋತ್ಸವ

Date:

ಹಿರಿಯಡ್ಕ, ಡಿ.4: ಗ್ರೀನ್ ಪಾರ್ಕ್ ಸೆಂಟ್ರಲ್ ಶಾಲೆ ಹಿರಿಯಡ್ಕ ಇಲ್ಲಿನ 2023-24ನೇ ಸಾಲಿನ ಶಾಲಾ ವಾರ್ಷಿಕೋತ್ಸವ (ಸೀನಿಯರ್ ವಿಭಾಗ) ಕಾರ್ಯಕ್ರಮ ನಡೆಯಿತು. ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯ ಆಡಳಿತಾಧಿಕಾರಿಯಾದ ರೆ| ಫಾ| ಲೆನ್ಸನ್ ಲಾರೆನ್ಸ್ ಲೋಬೊ ಉದ್ಘಾಟಿಸಿ ಮಾತನಾಡುತ್ತಾ, ಗ್ರೀನ್ ಪಾರ್ಕ್ ಶಾಲೆಯು ಹಳ್ಳಿ ಪ್ರದೇಶದಲ್ಲಿದ್ದು ವಿದ್ಯಾಭ್ಯಾಸ ನಡೆಸಲು ಅತ್ಯಂತ ಪ್ರಶಸ್ತವಾಗಿದೆ. ವಿದ್ಯಾರ್ಥಿಗಳ ಪರಿಶ್ರಮದ ಫಲವಾಗಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಶಾಲಾ ವಾರ್ಷಿಕೋತ್ಸವವು ಒಂದು ಉತ್ತಮ ವೇದಿಕೆಯಾಗಿರತ್ತದೆ. ಮಕ್ಕಳನ್ನು ಪ್ರೀತಿಯಿಂದ ನೋಡಿಕೊಂಡು ಮೌಲ್ಯಯುತವಾದ ವಿದ್ಯಾಭ್ಯಾಸವನ್ನು ಕೊಟ್ಟು ಪ್ರಜ್ಞಾವಂತರನ್ನಾಗಿ ರೂಪಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಮಾತನಾಡಿ, ಜೀವನದಲ್ಲಿ ದೊಡ್ಡ ದೊಡ್ಡ ಕನಸುಗಳನ್ನು ಇಟ್ಟುಕೊಂಡು ವಿದ್ಯಾರ್ಜನೆ ಮಾಡಬೇಕು. ಶಾಲೆ ಎಂಬುದು ವಿದ್ಯಾರ್ಥಿಗಳ ವಿದ್ಯಾ ಕೇಂದ್ರವಾಗಿದ್ದು, ಸಂಸ್ಕೃತಿ, ಸಂಬಂಧ, ಸಮಾಜದ ಬಗ್ಗೆ ಪೋಷಕರು ಸರಿಯಾದ ರೀತಿಯಲ್ಲಿ ತಿಳಿಹೇಳಬೇಕು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಬದುಕನ್ನು ಕಟ್ಟಿಕೊಳ್ಳುವಳ್ಳಿ ವಿಫಲರಾಗುತ್ತಿದ್ದಾರೆ, ಈ ಬಗ್ಗೆ ಪೋಷಕರು ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವೆಂದು ಹೇಳಿ ವಿದ್ಯಾರ್ಥಿಗಳಿಗೆ ತಾವು ಕಲಿತ ವಿದ್ಯಾಕೇಂದ್ರಕ್ಕೆ ಭೇಟಿ ನೀಡುವುದನ್ನು ರೂಡಿಸಿಕೊಳ್ಳಬೇಕೆಂದರು.

ಅತಿಥಿಗಳಾಗಿ ಡಿ.ಡಿ.ಪಿ.ಐ. ಕೆ. ಗಣಪತಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಶಾಲೆ ಹಳೆ ವಿದ್ಯಾರ್ಥಿ ಅಧಿತ್ ಎಸ್. ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲೆ ಸಂಧ್ಯಾ ಶೆಟ್ಟಿ ವಾರ್ಷಿಕ ವರದಿಯನ್ನು ಮಂಡಿಸಿದರು. ಉಪಪ್ರಾಂಶುಪಾಲೆ ಜಯಶ್ರೀ ತೆಂಡುಲ್ಕರ್, ಆಡಳಿತಾಧಿಕಾರಿ ಶೇಕರ್ ಗುಜ್ಜರ್‌ಬೆಟ್ಟು, ಸಂಯೋಜಕಿಯರಾದ ಉಷಾ ರಾವ್, ಗೀತಾ ಭಟ್, ಶಶಿಕಲಾ ರಾಜವರ್ಮ, ಶಾಲಾ ವ್ಯವಸ್ಥಾಪಕಿ ಅಮಿತಾ ಆರ್ ಹೆಗ್ಡೆ, ಬೋಧಕ ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸಂಜೀವಿನಿ ಸ್ವ ಸಹಾಯ ಗುಂಪುಗಳ ಆರ್ಥಿಕ ಸೇರ್ಪಡೆಗಾಗಿ ಬ್ಯಾಂಕರ್ಸ್ ಕಾರ್ಯಾಗಾರ

ಮಣಿಪಾಲ, ಜ.22: ಸ್ವ ಸಹಾಯ ಗುಂಪುಗಳ ಮಹಿಳೆಯರಿಗೆ ಬ್ಯಾಂಕ್ ಸೌಲಭ್ಯಗಳನ್ನು ಒದಗಿಸುವುದರಿಂದ...

ರಾಜ್ಯದಲ್ಲಿ ಗೋವುಗಳ ಮೇಲೆ ಆಕ್ರಮಣ- ಜ.25 ರಂದು ಉಪವಾಸಕ್ಕೆ ಪೇಜಾವರ ಶ್ರೀ ಕರೆ

ಉಡುಪಿ, ಜ.22: ರಾಜ್ಯದಲ್ಲಿ ಗೋವುಗಳ ಮೇಲೆ ಸರಣಿ ಹಿಂಸೆಗಳು ನಡೆಯುತ್ತಿದ್ದು ಗೋವುಗಳ...

ಕೆಎಂಸಿ ಮಣಿಪಾಲಕ್ಕೆ ಪ್ರತಿಷ್ಠಿತ ಸ್ಪಾರ್ಕ್ ಅನುದಾನ

ಮಣಿಪಾಲ, ಜ.22: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ನೇತ್ರಶಾಸ್ತ್ರ ವಿಭಾಗದ...

ಮಲ್ಪೆ: ಸಿರಿಧಾನ್ಯ ರೋಡ್ ಶೋ

ಉಡುಪಿ, ಜ.22: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ಉಡುಪಿ...
error: Content is protected !!