ಉಡುಪಿ, ಡಿ.8: ಸಮಗ್ರ ಶಿಕ್ಷಣ ಕರ್ನಾಟಕ ಇಲಾಖೆಯ ವತಿಯಿಂದ ಆನ್ಲೈನ್ ಮುಖಾಂತರ ನಡೆದ ಜಿಲ್ಲಾಮಟ್ಟದ ಕಲೋತ್ಸವ ಸ್ಪರ್ಧೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಭವಿಷ್ ಏಕಪಾತ್ರಾಭಿನಯದಲ್ಲಿ ಪ್ರಥಮ ಸ್ಥಾನ ಹಾಗೂ ವಾಣಿಜ್ಯ ವಿಭಾಗದ ವೀಕ್ಷಣ್ ಆಚಾರ್ಯ ಭಾವಗೀತೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ತ್ರಿಶಾ ಸಂಸ್ಥೆಯ ಅಧ್ಯಕ್ಷರಾದ ಸಿ.ಎ ಗೋಪಾಲಕೃಷ್ಣ ಭಟ್ ಹಾಗೂ ಪ್ರಾಂಶುಪಾಲರಾದ ಡಾ. ಅನಂತ್ ಪೈ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಕಲೋತ್ಸವ ಸ್ಪರ್ಧೆಯಲ್ಲಿ ತ್ರಿಶಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ಕಲೋತ್ಸವ ಸ್ಪರ್ಧೆಯಲ್ಲಿ ತ್ರಿಶಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
Date: