Sunday, September 8, 2024
Sunday, September 8, 2024

ಪ್ರವಾಸಿಗರ ಅನುಕೂಲಕ್ಕಾಗಿ ಸೋಮೇಶ್ವರ ಬೀಚ್ ಅಭಿವೃದ್ಧಿ ಕಾಮಗಾರಿ

ಪ್ರವಾಸಿಗರ ಅನುಕೂಲಕ್ಕಾಗಿ ಸೋಮೇಶ್ವರ ಬೀಚ್ ಅಭಿವೃದ್ಧಿ ಕಾಮಗಾರಿ

Date:

ಉಡುಪಿ, ಡಿ.8: ಬೈಂದೂರು ತಾಲೂಕು ಪಡುವರಿ ಸೋಮೇಶ್ವರ ಬೀಚಿನಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಯು ಬೀಚ್ ಅಭಿವೃದ್ಧಿ ಕಾಮಗಾರಿಯಾಗಿದ್ದು, 2021-22 ನೇ ಸಾಲಿನಲ್ಲಿ ಹತ್ತು ಕೋಟಿ ರೂ, ಬದಲಾಗಿ 15 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲು ಮಂಜೂರಾಗಿರುತ್ತದೆ. ಸದರಿ ಮೊತ್ತದಲ್ಲಿ ಬೀಚ್ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು 971.31 ಲಕ್ಷ ರೂ. ಮಂಜೂರಾಗಿದ್ದು, ಈ ಮೊತ್ತದಲ್ಲಿ ಖಾಸಗಿ ಜಮೀನನ್ನು ಖರೀದಿಸಿ, ಇಲಾಖೆಯ ಹೆಸರಿಗೆ ನೋಂದಾವಣೆ ಮಾಡುವುದು, ಸಮುದ್ರ ಕಿನಾರೆ ಬಳಿ ತಡೆಗೋಡೆ ನಿರ್ಮಾಣ, ಚರಂಡಿ ನಿರ್ಮಾಣ, ಪಾಥ್ ವೇ ನಿರ್ಮಾಣ, ಗ್ಯಾಲರಿ, ಶೌಚಾಲಯ ನವೀಕರಣ, ಕಲ್ಯಾಣಿ ನವೀಕರಣ, ವಿದ್ಯುತೀಕರಣ, ಪಾರ್ಕಿಂಗ್ ವ್ಯವಸ್ಥೆ, ಇಂಟರ್ ಲಾಕ್ ವ್ಯವಸ್ಥೆ, ಕಲ್ಲು ಬೆಂಚಿನ ಆಸನಗಳು ಹಾಗೂ ದಾರಿದೀಪಗಳು ಸೇರಿದಂತೆ ಇತ್ಯಾದಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕಾಮಗಾರಿಗಳನ್ನು ಪ್ರವಾಸೋದ್ಯಮ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ಪ್ರವಾಸೋದ್ಯಮ ಮೂಸೌಲಭ್ಯ ನಿಗಮ (ಕೆ.ಟಿ.ಐ.ಎಲ್) ವತಿಯಿಂದ ಕೈಗೊಳ್ಳಲಾಗುತ್ತಿದೆ.

ಈಗಾಗಲೇ ಪ್ರಗತಿಯಲ್ಲಿರುವ ಸೋಮೇಶ್ವರ ಬೀಚ್ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸ್ಥಳೀಯರು ಆಕ್ಷೇಪಣೆ ವ್ಯಕ್ತಪಡಿಸಿದ್ದು, ಸದರಿ ಯೋಜನೆಯು ಸೋಮೇಶ್ವರ ಬೀಚ್ ಅಭಿವೃದ್ಧಿ ಕಾಮಗಾರಿಯೇ ಹೊರತು ಮರಿನಾ ಯೋಜನೆಗೆ ಸಂಬಂಧಿಸಿದ ಕಾಮಗಾರಿಯಾಗಿರುವುದಿಲ್ಲ. ಪ್ರವಾಸಿಗರ ಅನುಕೂಲಕ್ಕಾಗಿ ಹಾಗೂ ಬೈಂದೂರು ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಸದರಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದೇಶಕ್ಕೆ ಶಿಕ್ಷಕರ ಸೇವೆ ಮಹತ್ವದ್ದು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಸೆ.7: ಶಿಕ್ಷಕರು ರಾಷ್ಟ್ರಕ್ಕೆ ಅತ್ಯಂತ ಮಹತ್ವದ ಸೇವೆ ಸಲ್ಲಿಸುತ್ತಿದ್ದು, ಇಂದಿನ...

ಸುಳ್ಳು ದಾಖಲೆ ಸೃಷ್ಟಿ: ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್ ಸೇವೆಯಿಂದ ಬಿಡುಗಡೆ

ನವದೆಹಲಿ, ಸೆ.7: 2023 ರ ಬ್ಯಾಚ್ ಐಎಎಸ್ ಪ್ರೊಬೇಷನರ್ ಪೂಜಾ ಖೇಡ್ಕರ್...

18ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ

ಬೆಳ್ಮಣ್, ಸೆ.7: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...

ಮದ್ಯ ಮಾರಾಟ ನಿಷೇಧ

ಉಡುಪಿ, ಸೆ.6: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ...
error: Content is protected !!