Tuesday, January 21, 2025
Tuesday, January 21, 2025

ಕೌಶಲ್ಯಾಧಾರಿತ ತರಬೇತಿ ಸಮಾರೋಪ ಸಮಾರಂಭ

ಕೌಶಲ್ಯಾಧಾರಿತ ತರಬೇತಿ ಸಮಾರೋಪ ಸಮಾರಂಭ

Date:

ಉಡುಪಿ, ಡಿ.11: ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಮತ್ತು ದಿ ಅಸೋಸಿಯೇಷನ್ ಆಫ್ ಪೀಪಲ್ ವಿಥ್ ಡಿಸೆಬಿಲಿಟಿ (ಎ.ಪಿ.ಡಿ) ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಕೌಶಲ್ಯಾಧಾರಿತ ತರಬೇತಿ ಮತ್ತು ಉದ್ಯೋಗ ಪೂರ್ವ ಮಾಹಿತಿ ಶಿಬಿರದ ಸಮಾರೋಪ ಸಮಾರಂಭ ಸೋಮವಾರ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆಯ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯುದ್ಧದ ಸಂದರ್ಭ, ಪ್ರಾಕೃತಿಕ ವಿಕೋಪ ಸೇರಿದಂತೆ ಇನ್ನಿತರ ತುರ್ತು ಸಂದರ್ಭದಲ್ಲಿ ನೆರವಿಗೆ ಧಾವಿಸುತ್ತಿದೆ. ರೆಡ್‌ಕ್ರಾಸ್ ಸಂಸ್ಥೆಯು ವಿಕಲಚೇತನರಿಗೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ತಯಾರಿಸಿ, ವಿತರಿಸುತ್ತಿದ್ದು, ವಿಕಲಚೇತನರ ಶ್ರೇಯೋಭಿವೃದ್ಧಿಗೆ ಸ್ಪಂದಿಸುವುದು ಸಂಸ್ಥೆಯ ಆದ್ಯ ಕರ್ತವ್ಯವಾಗಿದೆ ಎಂದರು. ವಿಕಲಚೇತನರು ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳ ಮಾಹಿತಿ ಪಡೆದು ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅವರುಗಳಿಗೆ ಅನುಕಂಪ ತೋರದೇ ಸಮಾಜದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಅನುವು ಮಾಡಿಕೊಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ ಮಾತನಾಡಿ, ಅಂಗವಿಕಲರು ಮನೆಯೊಳಗೆ ಸೀಮಿತವಾಗಿರದೇ, ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಇಲಾಖೆ ಹಾಗೂ ಸಂಘ-ಸಂಸ್ಥೆಗಳ ವತಿಯಿಂದ ನೀಡಲಾಗುವ ತರಬೇತಿಗಳ ಸದುಪಯೋಗವನ್ನು ಪಡೆದುಕೊಂಡು ತಮ್ಮ ಜೀವನವನ್ನು ತಾವು ನಡೆಸಲು ಮುಂದಾಗಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ಡಿ.ಡಿ.ಡಬ್ಲ್ಯೂ.ಓ ನಿವೃತ್ತ ಅಧಿಕಾರಿ ನಿರಂಜನ್ ಭಟ್ ಮಾತನಾಡಿ, ವಿಕಲಚೇತನರು ಅಂಗವಿಕಲತೆಯ ಬಗ್ಗೆ ಕೀಳರಿಮೆ ಹೊಂದದೇ ತಮ್ಮ ವಾಸ್ತವ ಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ನಾವು ಅಂಗವಿಕಲರು ಎಂಬುದನ್ನು ಮನಸ್ಸಿನಿಂದ ತೊರೆದು, ಸಕಾರಾತ್ಮಕ ಚಿಂತನೆಗಳನ್ನು ಅಳವಡಿಸಿಕೊಂಡು ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಎ.ಪಿ.ಡಿ ಸಂಸ್ಥೆಯು ವಿಕಲಚೇತನರನ್ನು ಮಾನಸಿಕವಾಗಿ ಸದೃಢರನ್ನಾಗಿ ಮಾಡಿ, ಅವರುಗಳ ಬದುಕನ್ನು ರೂಪಿಸಲು ನೆರವಾಗುತ್ತಿದ್ದು, ತರಬೇತಿ ಪಡೆದ ಶಿಬಿರಾರ್ಥಿಗಳು ಸ್ವಾವಲಂಭಿಗಳಾಗಿ ಜೀವನ ರೂಪಿಸಿಕೊಳ್ಳಬೇಕು ಎಂದರು.

ಎಪಿಡಿ ಸಂಸ್ಥೆಯ ಜಿಲ್ಲಾ ಯೋಜನಾ ಸಂಯೋಜಕ ಹರೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಇಲಾಖೆ ಮತ್ತು ಸಂಸ್ಥೆಯ ಸಹಯೋಗದಲ್ಲಿ ನಡೆದ ಉದ್ಯೋಗ ಪೂರ್ವ ತರಬೇತಿಯ ಶಿಬಿರಾರ್ಥಿಗಳು ಯೋಜನೆಯ ಸಂಪೂರ್ಣ ಸದುಪಯೋಗ ಪಡೆದುಕೊಂಡು ಭವಿಷ್ಯದಲ್ಲಿ ಉದ್ಯೋಗಾಕಾಂಕ್ಷಿಗಳಾಗಿ ಸ್ವಾವಲಂಭಿ ಜೀವನ ನಡೆಸಲು ಈ ತರಬೇತಿಯು ಉತ್ತಮ ವೇದಿಕೆಯಾಗಿದೆ. ತರಬೇತಿ ಪಡೆದ ಫಲಾನುಭವಿಗಳಿಗೆ ಸ್ಥಳೀಯ ಮಟ್ಟದಲ್ಲಿ ಖಾಲಿ ಇರುವ ಕ್ಷೇತ್ರಗಳಲ್ಲಿ ಉದ್ಯೋಗ ದೊರಕಿಸಿಕೊಡಲಾಗುವುದು ಎಂದರು. ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ಪದಕವನ್ನು ವಿತರಿಸಲಾಯಿತು. ಎಪಿಡಿ ಸಂಸ್ಥೆಯ ನೇಮಕಾತಿ ಅಧಿಕಾರಿ ಶ್ರೀಧರ್, ಶಿಬಿರಾರ್ಥಿಗಳು, ಪೋಷಕರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ತರಬೇತುದಾರರಾದ ಸುನೀತಾ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಂಪೆನಿ ಸೆಕ್ರೇಟರಿ ಪ್ರವೇಶ ಪರೀಕ್ಷೆ: ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿಗಳ ಸಾಧನೆ

ಕಾರ್ಕಳ, ಜ.21: ದಿನಾಂಕ 11.01.2025 ರಂದು ಇನ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್...

ಸೇವಾ ದಿನಾಚರಣೆ

ಗಂಗೊಳ್ಳಿ, ಜ.21: ನಾವು ಮಾಡುವ ಕೆಲಸದಲ್ಲಿ ಶ್ರದ್ಧೆ, ಪ್ರೀತಿ, ಶಿಸ್ತು ಇರಬೇಕು....

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...
error: Content is protected !!