Monday, November 25, 2024
Monday, November 25, 2024

ಪರ್ಯಾಯ ಮಹೋತ್ಸವಕ್ಕೆ ನಗರಸಭೆಯಿಂದ 5 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ

ಪರ್ಯಾಯ ಮಹೋತ್ಸವಕ್ಕೆ ನಗರಸಭೆಯಿಂದ 5 ಕೋಟಿ ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ: ಶಾಸಕ ಯಶ್ಪಾಲ್ ಸುವರ್ಣ

Date:

ಉಡುಪಿ, ಡಿ.11: ಜನವರಿಯಲ್ಲಿ ನಡೆಯುವ ಉಡುಪಿ ಪರ್ಯಾಯ ಮಹೋತ್ಸವ ಹಿನ್ನೆಲೆಯಲ್ಲಿ ಉಡುಪಿ ನಗರಸಭೆ ವತಿಯಿಂದ ರೂ. 5 ಕೋಟಿ ವೆಚ್ಚದಲ್ಲಿ ಉಡುಪಿ ನಗರದ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಳ್ಳಲಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಪ್ರತಿ ಬಾರಿಯ ಪರ್ಯಾಯ ಮಹೋತ್ಸವದಂತೆ ಪೂರ್ವಭಾವಿಯಾಗಿ ನಗರದ ಪ್ರಮುಖ ರಸ್ತೆ ಅಭಿವೃದ್ಧಿ, ಸ್ವಚ್ಚತೆ, ಚರಂಡಿ, ದಾರಿ ದೀಪ, ಕಿನ್ನಿಮುಲ್ಕಿ ಗೋಪುರ ಹಾಗೂ ಸರಕಾರಿ ಕಟ್ಟಡಗಳಿಗೆ ಪೈಂಟಿಂಗ್, ದೀಪಾಲಂಕಾರ ಸಹಿತ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ನಡೆಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅತೀ ಶೀಘ್ರದಲ್ಲಿ ಕಾಮಗಾರಿ ಆರಂಭಗೊಳ್ಳಲಿದೆ.

ಉಡುಪಿಯ ಪ್ರಮುಖ ರಸ್ತೆಗಳಾದ ಅಜ್ಜರಕಾಡು ವಾರ್ಡಿನ ಬ್ರಹ್ಮಗಿರಿ ಸರ್ಕಲ್ ನಿಂದ ಪುರಭವನ ರಸ್ತೆ, ಕುಂಜಿಬೆಟ್ಟು ವಾರ್ಡ್ ಕಟ್ಟೆ ಆಚಾರ್ಯ ಮಾರ್ಗ, ಕಿನ್ನಿಮುಲ್ಕಿ ವಾರ್ಡ್ ಬಿಗ್ ಬಜಾರ್ ಎದುರು ರಸ್ತೆ, ಬೈಲೂರು ವಾರ್ಡಿನ‌‌ ಅಮ್ಮಣ್ಣಿ ರಮಣ ಶೆಟ್ಟಿ ಹಾಲ್ ಮುಂಭಾಗದ ರಸ್ತೆ ಅಗಲೀಕರಣ, ಬೈಲೂರು ವಾರ್ಡಿನ ಶಾರದಾಂಬ ದ್ವಾರದಿಂದ ಹಳೇ ಸ್ಟೇಟ್ ಬ್ಯಾಂಕ್ ವರೆಗೆ ರಸ್ತೆ ಅಗಲೀಕರಣ, ಬೀಡಿನಗುಡ್ಡೆ ಜಂಕ್ಷನ್ ನಿಂದ ಚಿಟ್ಪಾಡಿ ಜಂಕ್ಷನ್ ವರೆಗೆ ರಸ್ತೆ ಮರು ಡಾಮರೀಕರಣ ಹಾಗೂ ಚರಂಡಿ ರಚನೆ ಸಹಿತ ವಿವಿಧ ಬಹುದಿನಗಳ ಬೇಡಿಕೆಯ ಕಾಮಗಾರಿಗಳಿಗೆ ಅನುದಾನ ಒದಗಿಸಲಾಗಿದೆ.

ಈಗಾಗಲೇ ರಾಜ್ಯ ಸರಕಾರದಿಂದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದು, ಕನಿಷ್ಠ 10 ಕೋಟಿ ಅನುದಾನ ಮಂಜೂರು ಮಾಡುವ ನಿರೀಕ್ಷೆಯಿದೆ ಎಂದು ಯಶ್ಪಾಲ್ ಸುವರ್ಣ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!