Monday, November 25, 2024
Monday, November 25, 2024

ಭತ್ತ ಖರೀದಿ: ಉಡುಪಿ ಜಿಲ್ಲೆಯ ವಿವಿಧೆಡೆ ನೋಂದಣಿ ಕೇಂದ್ರ ಸ್ಥಾಪನೆ

ಭತ್ತ ಖರೀದಿ: ಉಡುಪಿ ಜಿಲ್ಲೆಯ ವಿವಿಧೆಡೆ ನೋಂದಣಿ ಕೇಂದ್ರ ಸ್ಥಾಪನೆ

Date:

ಉಡುಪಿ, ಡಿ.12: ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಸಾಮಾನ್ಯ ಭತ್ತಕ್ಕೆ ಪ್ರತಿ ಕ್ವಿಂಟಾಲ್ ಗೆ ರೂ.2183 ಹಾಗೂ ಗ್ರೇಡ್ ಎ ಭತ್ತಕ್ಕೆ ರೂ.2203 ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ಜಿಲ್ಲೆಯ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 25 ಕ್ವಿಂಟಾಲ್ ನಂತೆ ಪ್ರತಿ ರೈತರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತವನ್ನು ನಿಯಮಾನುಸಾರ ಖರೀದಿಸಲು ಮತ್ತು ರೈತರಿಗೆ ನೊಂದಣಿ ಕೇಂದ್ರಗಳನ್ನು ತೆರೆದು ನೊಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತವನ್ನು ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದ್ದು, ಸದರಿ ಏಜೆನ್ಸಿಯವರು ಡಿಸೆಂಬರ್ 31 ರ ವರೆಗೆ ರೈತರಿಂದ ಭತ್ತ ಖರೀದಿಸಲು ನೊಂದಣಿ ಕಾರ್ಯಗಳನ್ನು ಹಾಗೂ 2024 ರ ಮಾರ್ಚ್ 31 ರ ಅವಧಿಯೊಳಗೆ ಭತ್ತ ಖರೀದಿ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ.

ಉಡುಪಿಯ ಎಪಿಎಂಸಿ ಯಾರ್ಡ್, ಕುಂದಾಪುರದ ಕೋಟೇಶ್ವರ ಹಾಗೂ ಕಾರ್ಕಳದ ಎಪಿಎಂಸಿ ಯಾರ್ಡ್ ಕೆ.ಎಫ್.ಸಿ.ಎಸ್.ಸಿ ಗೋದಾಮುಗಳಲ್ಲಿ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯಲ್ಲಿ ಭತ್ತ ಬೆಳೆದಿರುವ ರೈತರು ಕೃಷಿ ಇಲಾಖೆಯಿಂದ ನೀಡಿರುವ ಫ್ರೂಟ್ಸ್ ದತ್ತಾಂಶದಲ್ಲಿ ಸೇರ್ಪಡೆಗೊಂಡು ಮತ್ತು ಸೇರ್ಪಡೆಗೊಂಡಿರುವ ಫ್ರೂಟ್ಸ್ ತಂತ್ರಾಂಶದ ಗುರುತಿನ ಸಂಖ್ಯೆ ಹಾಗೂ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಯ ಮಾಹಿತಿಯೊಂದಿಗೆ ನೊಂದಣಿ ಕೇಂದ್ರದಲ್ಲಿ ನೋಂದಾಯಿಸಿಕೊಂಡು, ಈ ಯೋಜನೆಯ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!