Wednesday, January 22, 2025
Wednesday, January 22, 2025

ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಭಿತ್ತಿಪತ್ರ ಲೋಕಾರ್ಪಣೆ

ಉಡುಪಿ ತಾಲೂಕು ಸಾಹಿತ್ಯ ಸಮ್ಮೇಳನದ ಭಿತ್ತಿಪತ್ರ ಲೋಕಾರ್ಪಣೆ

Date:

ಬೆಳಗಾವಿ, ಡಿ.13: ತಾಲೂಕು ಸಮ್ಮೇಳನಗಳಿಗೆ ನೀಡುವ ಅನುದಾನವನ್ನು ಸ್ಥಗಿತಗೊಳಿಸಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಪರಿಶೀಲಿಸಿ ಕಾರ್ಯಗತಗೊಳಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಖಾತೆ ಸಚಿವ ಶಿವರಾಜ್‌ ಸಂಗಪ್ಪ ತಂಗಡಗಿ ಹೇಳಿದರು. ಅವರು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಉಡುಪಿ ತಾಲೂಕು ಘಟಕದ ವತಿಯಿಂದ ಡಿಸೆಂಬರ್ 30 ಶನಿವಾರದಂದು ಮಣಿಪಾಲದ ಶಿವಪ್ಪಾಡಿ ಉಮಾಮಹೇಶ್ವರ ದೇವಸ್ಥಾನದ ಶ್ರೀ ರಮಾನಂದ ಸ್ಮೃತಿ ಮಂಟಪದಲ್ಲಿ ನಡೆಯಲಿರುವ ಉಡುಪಿ ತಾಲೂಕು 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಭಿತ್ತಿಪತ್ರವನ್ನು ಬೆಳಗಾವಿಯ ಸುವರ್ಣ ಸೌಧದ ಸಚಿವರ ಕಚೇರಿಯಲ್ಲಿ ಬುಧವಾರ ಬಿಡುಗಡೆಗೊಳಿಸಿ ಮಾತನಾಡಿದರು.

ಉಡುಪಿ ಜಿಲ್ಲೆ ಹಾಗೂ ತಾಲೂಕು ಘಟಕದ ಸಾಹಿತ್ಯ ಪರಿಷತ್ತಿನ ಕಾರ್ಯವೈಖರಿಯನ್ನು ಶ್ಲಾಘಿಸಿ ಸಮ್ಮೇಳನದಲ್ಲಿ ಭಾಗವಹಿಸುವೆ ಎಂದರು. ಈ ಸಂದರ್ಭದಲ್ಲಿ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ತಾಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಮತ್ತು ಜಿಲ್ಲಾ ಸಹ ಕಾರ್ಯದರ್ಶಿ ಮೋಹನ್ ಉಡುಪ ಹಂದಾಡಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!