ಉಡುಪಿ, ಡಿ.13: ಡಿಸೆಂಬರ್ 14 ರಂದು ನಿಗಧಿಪಡಿಸಲಾಗಿದ್ದ ಕಾಪು ತಾಲೂಕು ಮಟ್ಟದ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಿದ್ದು, ಸದರಿ ಕಾರ್ಯಕ್ರಮವನ್ನು ಡಿಸೆಂಬರ್ 15 ರಂದು ಬೆಳಗ್ಗೆ 10 ಗಂಟೆಗೆ ಕಾಪು ಆಡಳಿತ ಸೌಧದ ತಾಲೂಕು ಕಚೇರಿ ಸಭಾಂಗಣದಲ್ಲಿ ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮಿ ಎಸ್.ಆರ್ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಕಾಪು ತಾಲೂಕು ವ್ಯಾಪ್ತಿಯ ಗ್ರಾಮಗಳಿಗೆ ಸಂಬಂಧಪಟ್ಟ ಪಿಂಚಣಿ ಈಗಾಗಲೇ ಅರ್ಜಿ ಸಲ್ಲಿಸಿ ಕೋರಿಕೆ ತಿರಸ್ಕೃತಗೊಂಡಿರುವವರು, ಪಿಂಚಣಿ ಬಾರದಿರುವ ಹಾಗೂ ಪಿಂಚಣಿಗೆ ಸಂಬಂಧಿಸಿದ ಇನ್ನಿತರ ದೂರುಗಳ ಫಲಾನುಭವಿಗಳು ಹಾಜರಾಗಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಕಾಪು ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ. 15: ಕಾಪು ತಾಲೂಕು ಮಟ್ಟದ ಪಿಂಚಣಿ ಅದಾಲತ್
ಡಿ. 15: ಕಾಪು ತಾಲೂಕು ಮಟ್ಟದ ಪಿಂಚಣಿ ಅದಾಲತ್
Date: