ಉಡುಪಿ, ಡಿ.17: ಭಾರತ ಸರ್ಕಾರದ ಶಿಕ್ಷಣ ಸಚಿವಾಲಯ ಆಯೋಜಿಸಿದ ಕಲೋತ್ಸವ – 2023 ರ ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಕಟಪಾಡಿಯ ತ್ರಿಶಾ ವಿದ್ಯಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಭವಿಷ್ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ, ಜನವರಿ ತಿಂಗಳಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಪ್ರಾಂಶುಪಾಲರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿ ಶುಭ ಕೋರಿದ್ದಾರೆ.
ಕಲೋತ್ಸವ: ತ್ರಿಶಾ ವಿದ್ಯಾ ಕಾಲೇಜಿನ ಭವಿಷ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲೋತ್ಸವ: ತ್ರಿಶಾ ವಿದ್ಯಾ ಕಾಲೇಜಿನ ಭವಿಷ್ ರಾಷ್ಟ್ರಮಟ್ಟಕ್ಕೆ ಆಯ್ಕೆ
Date: