ತೆಂಕನಿಡಿಯೂರು, ಡಿ.19: ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ ಸಮಾಜಕಾರ್ಯ ವಿಭಾಗದ ಸಮಾಜಕಾರ್ಯ ವೇದಿಕೆ 2023-24 ‘ಅಭ್ಯುದಯ’ ವನ್ನು ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯ ಹಿರಿಯ ಅಧಿಕಾರಿ ಕರುಣಾಕರ ಜೈನ್ ಉದ್ಘಾಟಿಸಿದರು. ಗ್ರಾಮೀಣಾಭಿವೃದ್ಧಿಯಲ್ಲಿ ಯುವಜನರ ಪಾತ್ರ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿವಿಧ ಕೌಶಲ್ಯಗಳ ಕುರಿತು ಮಾರ್ಗದರ್ಶನ ನೀಡಿದರು. ಪ್ರಾಂಶುಪಾಲರಾದ ಪ್ರೊ. ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶೈಕ್ಷಣಿಕ ಸಲಹೆಗಾರರಾದ ಡಾ. ಪ್ರಸಾದ್ ರಾವ್ ಎಂ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಾಘವ ನಾಯ್ಕ, ಐ.ಕ್ಯೂ.ಎ.ಸಿ ಸಂಚಾಲಕಿ ಡಾ. ಮೇವಿ ಮಿರಾಂದ, ಸಮಾಜಕಾರ್ಯ್ ಸ್ನಾತಕೋತ್ತರ ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಉಪಸ್ಥಿತರಿದ್ದರು. ವಿಭಾಗದ ಉನ್ಯಾಸಕಿ ಡಾ. ಪ್ರಮೀಳಾ ಜೆ. ವಾಸ್ ಸಮಾಜಕಾರ್ಯ ವೇದಿಕೆಯ ಪದಾಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯ ಅಧ್ಯಕ್ಷ ಸಂದೇಶ್ ಜಿ. ಅಂಬಿಗ್ ಈ ಸಾಲಿನ ಕ್ರಿಯಾ ಯೋಜನೆಯನ್ನು ವಿವರಿಸಿದರು. ದ್ವಿತೀಯ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿ ವಿಜೇತ್ ಕಾರ್ಯಕ್ರಮ ನಿರೂಪಿಸಿದರು. ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿ ಗೌತಮಿ ಸ್ವಾಗತಿಸಿ, ಪ್ರಥಮ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿನಿ ಶಿವಾನಿ ವಂದಿಸಿದರು.