Monday, November 25, 2024
Monday, November 25, 2024

ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಣಿಗೆ ಸೂಚನೆ

ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಣಿಗೆ ಸೂಚನೆ

Date:

ಉಡುಪಿ, ಡಿ.19: ಕಾರ್ಮಿಕ ಇಲಾಖೆಯ ವತಿಯಿಂದ ಸ್ವಿಗ್ಗಿ, ಜ್ಹೊಮ್ಯಾಟೋಗಳಲ್ಲಿ ಫುಡ್ ಡೆಲಿವರಿ ಮಾಡುವ ಹಾಗೂ ಇ-ಕಾಮರ್ಸ್ ಸಂಸ್ಥೆಗಳಾದ ಅಮೇಜಾನ್, ಬಿಗ್ ಬಾಸ್ಕೆಟ್, ಪ್ಲಿಪ್ ಕಾರ್ಟ್ ಸಂಸ್ಥೆಗಳಲ್ಲಿ ಪೂರ್ಣಕಾಲಿಕ ಹಾಗೂ ಅರೆಕಾಲಿಕ ಡೆಲಿವರಿ ನೌಕರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರುಗಳು ಸರಕು ಸೇವೆಗಳನ್ನು ನಿಗಧಿತ ಸಮಯಕ್ಕೆ ಸರಿಯಾಗಿ ವಾಹನಗಳಲ್ಲಿ ವಿತರಿಸುವ ಸಂದರ್ಭದಲ್ಲಿ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಇದ್ದು, ಅಪಘಾತದಿಂದ ಮರಣ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ್ದಲ್ಲಿ ಅವರು ಹಾಗೂ ಅವರ ಅವಲಂಭಿತರು ಆರ್ಥಿಕ ಸಂಕಷ್ಟಕ್ಕೆ ಒಳಗಾಗುತ್ತಾರೆ. ಇಂತಹ ಸಂದರ್ಭದಲ್ಲಿ ಗಿಗ್ ಕಾರ್ಮಿಕರುಗಳಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುವ ದೃಷ್ಠಿಯಿಂದ ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ನೊಂದಾಯಿಸಿದ ಫಲಾನುಭವಿಗಳು ಅಪಘಾತದಿಂದ ಉಂಟಾಗುವ ಮರಣ, ಸಂಪೂರ್ಣ ಶಾಶ್ವತ/ ಭಾಗಶಃ ದುರ್ಬಲತೆಗೆ ಹಾಗೂ ತಾತ್ಕಾಲಿಕ ದುರ್ಬಲತೆಗೆ ಕಾನೂನು ಬದ್ಧ ವಾರಸುದಾರರಿಗೆ ಅಥವಾ ಫಲಾನುಭವಿಗೆ ವಿಮಾ ಮೊತ್ತ ದೊರೆಯಲಿದೆ.

ಜಿಲ್ಲೆಯ 18 ರಿಂದ 60 ವರ್ಷದೊಳಗಿನ ಎಲ್ಲಾ ಗಿಗ್ ಕಾರ್ಮಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಸೇವಾಸಿಂಧು ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿ, ಉಡುಪಿ ಉಪವಿಭಾಗ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ಉಡುಪಿ, ಕಾರ್ಕಳ ಮತ್ತು ಕುಂದಾಪುರ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!