Sunday, January 19, 2025
Sunday, January 19, 2025

ದಿನಪತ್ರಿಕೆ ವಿತರಕರಿಗೆ ವಿಮಾ ಯೋಜನೆ: ನೋಂದಣಿಗೆ ಸೂಚನೆ

ದಿನಪತ್ರಿಕೆ ವಿತರಕರಿಗೆ ವಿಮಾ ಯೋಜನೆ: ನೋಂದಣಿಗೆ ಸೂಚನೆ

Date:

ಉಡುಪಿ, ಡಿ.22: ಕಾರ್ಮಿಯ ಇಲಾಖೆಯು ದಿನಪತ್ರಿಕೆ ವಿತರಕ ಕಾರ್ಮಿಕರಿಗೆ ಅಪಘಾತ ಪರಿಹಾರ ಹಾಗೂ ವೈದ್ಯಕೀಯ ಸೌಲಭ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಇ-ಶ್ರಮ್‌ನಲ್ಲಿ ನೋಂದಣಿಯಾದ ದಿನಪತ್ರಿಕೆ ವಿತರಕ ಕಾರ್ಮಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. 16 ರಿಂದ 59 ವರ್ಷದೊಳಗಿನ ದಿನಪತ್ರಿಕೆ ವಿತರಕ ಕಾರ್ಮಿಕರು ಇದುವರೆಗೂ ಇ-ಶ್ರಮ್‌ನಲ್ಲಿ ನ್ಯೂಸ್ ಪೇಪರ್ ಬಾಯ್ ಎಂದು ನೋಂದಣಿ ಮಾಡದೇ ಇದ್ದರೆ, ಈ ಕೂಡಲೇ ಇ-ಶ್ರಮ್ ಪೋರ್ಟಲ್ http://www.eshram.gov.in ನಲ್ಲಿ ಸ್ವಯಂ ಆಗಿ ಅಥವಾ ಹತ್ತಿರದ ಸೇವಾ ಕೇಂದ್ರಗಳಲ್ಲಿ ನೋಂದಾಯಿಸುವ ಮೂಲಕ ಯೋಜನೆಯ ಲಾಭವನ್ನು ಪಡೆಯಬಹುದು.

ಜಿಲ್ಲೆಯಲ್ಲಿ ವಿಶೇಷ ಇ-ಶ್ರಮ್ ನೋಂದಣಿ ಕ್ಯಾಂಪ್‌ಗಳನ್ನು ಡಿಸೆಂಬರ್ 28 ಮತ್ತು 30 ರಂದು ಜಿಲ್ಲಾ ಕೇಂದ್ರ ಸ್ಥಾನದ ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ಹಾಗೂ 2024 ರ ಜನವರಿ 3 ರಂದು ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ದಿನಪತ್ರಿಕೆ ವಿತರಕ ಕಾರ್ಮಿಕರು ವಿಶೇಷ ನೋಂದಣಿ ಕ್ಯಾಂಪ್‌ನಲ್ಲಿ ಭಾಗವಹಿಸಿ ಇ-ಶ್ರಮ್‌ನಲ್ಲಿ ನೋಂದಣಿ ಮಾಡಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 (24*7), ಕಾರ್ಮಿಕ ಅಧಿಕಾರಿಗಳು ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರು/ ಕಾರ್ಮಿಕ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕಾರ್ಮಿಕ ಅಧಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!