Sunday, August 30, 2026
Sunday, August 30, 2026

ಕೋಟೇಶ್ವರ: ಅಭಿವಿನ್ಯಾಸ ಕಾರ್ಯಕ್ರಮ

ಕೋಟೇಶ್ವರ: ಅಭಿವಿನ್ಯಾಸ ಕಾರ್ಯಕ್ರಮ

Date:

ಕೋಟ: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಕುಂದಾಪುರ ಇಲ್ಲಿನ ಸ್ನಾತಕೋತ್ತರ ವಿಭಾಗದ ಎಂ.ಕಾಂ. ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇಲ್ಲಿನ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕ ವಿಜಯಾ ಬಿ. ಸಂಪನ್ಮೂಲ ವ್ಯಯಕ್ತಿಗಳಾಗಿ ಭಾಗವಹಿಸಿ ಅಭಿವಿನ್ಯಾಸ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪುಸ್ತಕ ಸ್ನೇಹಿ ಮನೋಭಾವನೆಯನ್ನು ರೂಢಿಸಿಕೊಂಡು ವೃತ್ತಿಪರತೆಯನ್ನು ಕಾಯ್ದುಕೊಳ್ಳಬೇಕೆಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ ವಹಿಸಿದ್ದರು.

ವಾಣಿಜ್ಯ ವಿಣಾಗದ ಸ್ನಾತಕೋತ್ತರ ಘಟಕದಿಂದ ಏರ್ಪಡಿಸಲ್ಪಟ್ಟ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಉಷಾದೇವಿ ಜೆ.ಎಸ್., ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಶೇಖರ ಬಿ., ಐಕ್ಯೂಎಸಿ ಸಂಚಾಲಕರಾದ ನಾಗರಾಜ ಯು., ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಗೀತಾ ಎಂ. ಉಪಸ್ಥಿತರಿದ್ದರು.

ಎಂ.ಕಾಂ. ವಿದ್ಯಾರ್ಥಿಗಳಾದ ಪಲ್ಲವಿ, ಪವಿತ್ರ ಹಾಗೂ ಸಂಗೀತಾ ಪ್ರಾರ್ಥಿಸಿದರು. ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ಗೀತಾ ಎಂ. ಸ್ವಾಗತಿಸಿದರು. ಎಂ.ಕಾಂ. ವಿದ್ಯಾರ್ಥಿನಿಯಾದ ಸಿದ್ಧಿ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸಂತೋಷ್ ನಾಯ್ಕ್ ಹೆಚ್. ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!