ಕೋಟ, ಡಿ.26: ನಡೆದಾಡುವ ವಿಶ್ವಕೋಶ ಡಾ. ಶಿವರಾಮ ಕಾರಂತ ಕನ್ನಡ ಸಾಹಿತ್ಯ ಲೋಕದ ಸಮುದ್ರ, ಅವರು ಬದುಕಿನುದ್ದಕ್ಕೂ ನೀಡಿದ ಸಂದೇಶ ನಮಗೆಲ್ಲ ಮಾದರಿಯಾಗಿದೆ. ಅವರ ಬದುಕು ಬರಹವನ್ನು ಯುವಜನತೆಗೆ ರವಾನಿಸುವ ಉದ್ದೇಶದಿಂದ ಕಾರಂತ ಥೀಮ್ ಒಂದಲ್ಲ ಒಂದು ಸಾಹಿತ್ಯಿಕ-ಸಾಂಸ್ಕೃತಿಕ ಚಟುವಿಟಕೆ ಮೂಲಕ ಮಕ್ಕಳ ಸೃಜನ್ಮಾತಕ ಬೆಳವಣಿಗೆಗೆ ಸಹಕಾರಿಯಾಗುತ್ತಿರುವುದು ಶ್ಲಾಘನೀಯ ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ ಹೇಳಿದರು. ಅವರು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗಮಂದಿರ, ಆರ್ಟ್ ಗ್ಯಾಲರಿ, ಗ್ರಂಥಾಲಯ, ಸಂಗೀತ ಕಾರಂಜಿ ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.
ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ ಸತೀಶ್ ಕುಂದರ್ ಹಾಗೂ ಸದಸ್ಯರು, ಬಿಜೆಪಿ ಮುಖಂಡ ಉದಯಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಕಾರಂತ ಪ್ರತಿಷ್ಠಾನದ ಟ್ರಸ್ಟಿ ಸುಬ್ರಾಯ್ ಆಚಾರ್ಯ, ಮುಂತಾದವರು ಉಪಸ್ಥಿತರಿದ್ದರು.