Tuesday, January 21, 2025
Tuesday, January 21, 2025

ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

Date:

ಉಡುಪಿ, ಡಿ.29: ಇಡೀ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪುರವರ ಸಾಹಿತ್ಯದ ಪರಿಕಲ್ಪನೆಗಳನ್ನು ಜೀವನದಲ್ಲಿ ಪ್ರತಿಯೊಬ್ಬರೂ ಅಳವಡಿಸಿಕೊಂಡಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಶುಕ್ರವಾರ ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಜಯಂತಿ ಪ್ರಯುಕ್ತ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕುವೆಂಪು ಒಬ್ಬ ಶ್ರೇಷ್ಠ ಕವಿ. ಅವರು ತಮ್ಮ ಆಲೋಚನೆಗಳನ್ನು ಸಾಹಿತ್ಯ ಹಾಗೂ ಕೃತಿಗಳ ಮೂಲಕ ಸಮಾಜಕ್ಕೆ ನೀಡಿದ್ದು, ಅವರ ಈ ಬರಹಗಳು ಹಲವಾರು ಸಾಮಾಜಿಕ ಸುಧಾರಣೆ ತಂದಿದೆ. ದುಂದು ವೆಚ್ಚ ಮಾಡದೇ ಮದುವೆ ನಡೆಸುವ ಸಲುವಾಗಿ ಪ್ರಪಂಚಕ್ಕೆ ಮಂತ್ರಮಾಂಗಲ್ಯ ಪರಿಚಯಿಸಿದ್ದಾರೆ. ಕುವೆಂಪು ಅವರು ರಚಿಸಿದ ನಾಡಗೀತೆಯನ್ನು ದಿನನಿತ್ಯ ಹಾಡುವ ಮೂಲಕ ಪ್ರತಿದಿನ ಅವರನ್ನು ನಾವು ನೆನೆಯುತ್ತಿದ್ದೇವೆ. ಸಾಹಿತ್ಯ ಲೋಕದಲ್ಲಿ ಪ್ರಥಮ ಬಾರಿಗೆ ಜ್ಞಾನಪೀಠ ಪ್ರಶಸ್ತಿಯನ್ನು ಕರುನಾಡಿಗೆ ತಂದುಕೊಟ್ಟ ಶ್ರೇಷ್ಠ ಕವಿ ಕುವೆಂಪು ಅವರು ಎಂದರು.

ಮಾನವನನ್ನು ವಿಶ್ವ ಮಾನವ ಮಾಡಬೇಕೆನ್ನುವುದು ಕುವೆಂಪು ರವರ ಕನಸಾಗಿದ್ದು, ಪ್ರತಿಯೊಬ್ಬರಲ್ಲೂ ಇರುವ ವ್ಯಕ್ತಿ ಸ್ವಾತಂತ್ರ್ಯವನ್ನು ಗೌರವಿಸಬೇಕು ಎನ್ನುವುದು ಇದರ ನಿಯಮ. ಆದ್ದರಿಂದ ಅವರು ಹುಟ್ಟಿದ ದಿನವನ್ನು ವಿಶ್ವಮಾನವ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು. ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಪ್ರಜ್ಞಾ ಮಾರ್ಪಳ್ಳಿ ಕುವೆಂಪು ಅವರ ಕುರಿತು ಉಪನ್ಯಾಸ ನೀಡಿ, ಕುವೆಂಪು ಸಾಹಿತ್ಯದಲ್ಲಿರುವ ಬರಹಗಳಲ್ಲಿನ ಸಾಮರ್ಥ್ಯವನ್ನು ಅರಿತು ಪರಿಪೂರ್ಣ ಬದುಕನ್ನು ಕಟ್ಟಿಕೊಂಡಾಗ ಕುವೆಂಪು ಅವರ ವಿಶ್ವಮಾನವ ಕನಸು ಈಡೇರುತ್ತದೆ. ಮನುಷ್ಯ ಕರ್ತವ್ಯದೊಂದಿಗೆ ತನ್ನ ಜೀವನವನ್ನು ಹೇಗೆ ಆದರ್ಶವಾಗಿಟ್ಟುಕೊಳ್ಳಬೇಕು ಎಂಬುದನ್ನು ಅವರ ಶ್ರೀ ರಾಮಾಯಣ ದರ್ಶನಂ ಕೃತಿಯಲ್ಲಿ ಕಾಣಬಹುದಾಗಿದೆ ಎಂದರು. ವಿಶ್ವ ಮಾನವತೆ ಕಡೆಗೆ ಬದುಕಿನ ಪಥ ಸಾಗಬೇಕು. ನಮ್ಮ ಆಲೋಚನೆಗಳು ಪೂರ್ಣಪ್ರಮಾಣದಲ್ಲಿ ತಂತ್ರಜ್ಞಾನಕ್ಕೆ ತಲೆಬಾಗಬಾರದು. ತ್ಯಾಗ, ಪ್ರೀತಿ, ಕರುಣೆ, ಸ್ಪಂದಿಸುವಿಕೆಯ ಮನೋಭಾವವನ್ನು ಬೆಳೆಸಿಕೊಂಡಾಗ ವ್ಯಕ್ತಿ ಮಾನವನಾಗುತ್ತಾನೆ. ವರ್ಣ ರಹಿತ, ವರ್ಗರಹಿತ, ಜಾತಿ ಮೀರಿದ ಸಮಾಜ ನಿರ್ಮಾಣ ಮಾಡಬೇಕೆನ್ನುವುದು ಕುವೆಂಪು ರವರ ಕನಸಾಗಿದ್ದು, ಅದನ್ನು ಈಡೇರಿಸುವಲ್ಲಿ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದರು. ಈ ಸಂದರ್ಭದಲ್ಲಿ ಕುವೆಂಪು ರವರ ಭಾವಗೀತೆ ಹಾಗೂ ಅವರ ಕುರಿತು ಏರ್ಪಡಿಸಲಾದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಹಾವಂಜೆ ವಿನಯ ಬಾಬುರಾಜ್ ಮತ್ತು ತಂಡದವರಿಂದ ಹಾಗೂ ದಿನೇಶ್ ಹಾವಂಜೆ ಅವರಿಂದ ಗೀತಗಾಯನ ಮತ್ತು ಜಾಹ್ನವಿ ಇವರಿಂದ ಕೊಳಲು ವಾದನ ನಡೆಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಕೆ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕಾರ್ಯದರ್ಶಿ ನರಸಿಂಹಮೂರ್ತಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಡಾ. ಸುಮಾ, ಶಾಲೆಯ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿನಿಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ಶಿಕ್ಷಕ ರಾಮಚಂದ್ರ ಭಟ್ನಿ ರೂಪಿಸಿದರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಇಂದಿರಾ ಬಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!