Sunday, January 19, 2025
Sunday, January 19, 2025

ಜ. 22 ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಿಸಿ: ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

ಜ. 22 ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆಗೆ ಸಾರ್ವತ್ರಿಕ ರಜೆ ಘೋಷಿಸಿ: ಮುಖ್ಯಮಂತ್ರಿಗಳಿಗೆ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಜ.1: ಸಮಸ್ತ ಹಿಂದೂಗಳ ಶ್ರದ್ಧಾ ಕೇಂದ್ರವಾಗಿ 500 ವರ್ಷಗಳ ಕನಸು ನನಸಾಗುವ ಸಮಸ್ತ ಭಾರತೀಯರ ಪಾಲಿಗೆ ಅತ್ಯಂತ ಪವಿತ್ರ ದಿನವಾಗಿ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆಯ ಭಾವನಾತ್ಮಕ ಐತಿಹಾಸಿಕ ಕ್ಷಣವನ್ನು ಮನೆ ಮನಗಳಲ್ಲಿ ಆಚರಿಸಲು ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿಯವರ ಉಪಸ್ಥಿತಿಯಲ್ಲಿ ಶ್ರೀ ರಾಮ ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆಯ ಮೂಲಕ ಕೋಟ್ಯಾಂತರ ಭಕ್ತರ ಹಲವು ಶತಮಾನಗಳ ಮಂದಿರದ ಲೋಕಾರ್ಪಣೆಗೆ ಜಗತ್ತು ಸಾಕ್ಷಿಯಾಗಲಿದೆ. ಈ ವಿಶೇಷ ದಿನದಂದು ದೇಶದಾದ್ಯಂತ ಹಲವು ದೇವಸ್ಥಾನ, ಮಂದಿರ ಹಾಗೂ ಸಂಘ ಸಂಸ್ಥೆಗಳಲ್ಲಿ ವಿಶೇಷ ಪೂಜೆ, ಭಜನಾ ಸಂಕೀರ್ತನೆ, ಅನ್ನಸಂತರ್ಪಣೆಯ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ಅಚರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಈ ಪವಿತ್ರ ದಿನವನ್ನು ಮನೆ ಮನೆಗಳಲ್ಲಿ ದೀಪಾವಳಿ ಹಬ್ಬದಂತೆ ಆಚರಿಸಲು ಕರೆ ನೀಡಿದ್ದಾರೆ. ರಾಜ್ಯ ಸರಕಾರ ಜನವರಿ 22 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಿ ಪವಿತ್ರ ದಿನವನ್ನು ಸಂಭ್ರಮದಿಂದ ಆಚರಿಸಲು ರಾಜ್ಯದ ಜನತೆಗೆ ಅವಕಾಶ ಕಲ್ಪಿಸುವಂತೆ ಮನವಿ ಮಾಡಿದ್ದರೆ.

ಉಡುಪಿಯಲ್ಲಿ ಬೆಳಕಿನ ರಾಮೋತ್ಸವ ಆಚರಿಸೋಣ: ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸಮಸ್ತ ಹಿಂದೂಗಳ ಬಹು ಶತಮಾನದ ಕನಸು ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆಯ ಐತಿಹಾಸಿಕ ದಿನವನ್ನು ಸಂಭ್ರಮದಿಂದ ಆಚರಿಸುವ ನಿಟ್ಟಿನಲ್ಲಿ ಉಡುಪಿಯ ಜನತೆ ತಮ್ಮ ಮನೆ, ಕಚೇರಿ, ಕಟ್ಟಡಗಳಿಗೆ ದೀಪಾಲಂಕಾರ ಮಾಡಿ ರಾಮ ಜ್ಯೋತಿಯನ್ನು ಬೆಳಗುವ ಮೂಲಕ ಪೊಡವಿಗೊಡೆಯ ಕೃಷ್ಣನ ನಾಡಿನಿಂದ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ಸಮಿತಿಯ ವಿಶ್ವಸ್ಥರಾಗಿರುವ ಪೇಜಾವರ ಮಠದ ಪರಮಪೂಜ್ಯ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥರ ಆಶಯದಂತೆ ದೇಶಕ್ಕೆ ಹೊಸ ಸಂದೇಶ ಸಾರುವಂತೆ ಉಡುಪಿಯ ಜನತೆಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಜನವರಿ 14 ಮಕರ ಸಂಕ್ರಾತಿಯ ಶುಭ ದಿನದಿಂದ ಆರಂಭಗೊಂಡು, ಜನವರಿ 18 ರಂದು ಉಡುಪಿಯ ಪುತ್ತಿಗೆ ಮಠದ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವ ಹಾಗೂ ಜನವರಿ 22 ರಂದು ನಡೆಯುವ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ಸಮಾರಂಭದ ಪ್ರಯುಕ್ತ ಜನವರಿ 25 ರವೆರೆಗೆ 10 ದಿನಗಳ ಕಾಲ ದೀಪಾಲಂಕಾರ ಮಾಡುವಂತೆ ಜನತೆಗೆ ಮನವಿ ಮಾಡಿದ್ದಾರೆ.

ವಿಶೇಷ ಹಾಲು ಪಾಯಸ ಸೇವೆ ಹಾಗೂ ಕುಣಿತ ಭಜನಾ ಕಾರ್ಯಕ್ರಮ: ಜನವರಿ 22 ರಂದು ರಾಮ ಮಂದಿರದ ಲೋಕಾರ್ಪಣೆಯ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ವತಿಯಿಂದ ಭಕ್ತಾದಿಗಳಿಗೆ ವಿಶೇಷ ಹಾಲು ಪಾಯಸ ಸೇವೆ ಹಾಗೂ ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಿವಿಧ ತಂಡಗಳ ಕುಣಿತ ಭಜನಾ ಕಾರ್ಯಕ್ರಮ ಆಯೋಜಿಸಿರುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!