ಕುಂದಾಪುರ, ಜ.2: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ 24 ವರ್ಷ ಹಾಗೂ ಉಪ ಪ್ರಾಂಶುಪಾಲರಾಗಿ ಆರು ವರ್ಷ ಸೇವೆ ಸಲ್ಲಿಸಿದ್ದು ಮಾತ್ರವಲ್ಲದೆ 20 ವರ್ಷಗಳ ಕಾಲ ಎನ್.ಸಿ.ಸಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಹೊಂದಿದ ಉಮೇಶ್ ಕರ್ಣಿಕ್ ಎಸ್ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು.
ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ ಅಧ್ಯಕ್ಷತೆ ವಹಿಸಿದ್ದರು. ಜಿಎಸ್‌ವಿಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಸಂಚಾಲಕ ಎನ್ ಸದಾಶಿವ ನಾಯಕ್, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ., ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರಾಘವೇಂದ್ರ ಶೇರುಗಾರ್ ಉಮೇಶ್ ಕರ್ಣಿಕರನ್ನು ಅಭಿನಂದಿಸಿ ಮಾತನಾಡಿದರು.
ಕಚೇರಿಯ ಹೈಸ್ಕೂಲು ವಿಭಾಗದ ಮುಖ್ಯಸ್ಥರಾದ ಶ್ರೀಧರ್ ಗಾಣಿಗ, ಉಪನ್ಯಾಸಕರಾದ ನಾರಾಯಣ ಈ ನಾಯ್ಕ್, ಭಾಸ್ಕರ್ ಶೆಟ್ಟಿ, ನರೇಂದ್ರ ಎಸ್ ಗಂಗೊಳ್ಳಿ, ನಾಗರಾಜ ಶೆಟ್ಟಿ, ಸುಗುಣ ಆರ್ ಕೆ., ಸುಮತಿ ಉಡುಪ, ಸುಪ್ರೀತ ಮತ್ತು ಪರಿಚಾರಕ ಪ್ರಭಾಕರ್ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಉಮೇಶ್ ಕರ್ಣಿಕ್ ಮತ್ತು ಸುಮನ ಕರ್ಣಿಕ್ ದಂಪತಿಯನ್ನು ಅಭಿನಂದಿಸಿ ಸನ್ಮಾನಿಸಲಾಯಿತು. ಸರಸ್ವತಿ ವಿದ್ಯಾಲಯ ಆಡಳಿತ ಮಂಡಳಿಯ ಖಜಾಂಚಿ ಅಶ್ವಿನ್ ನಾಯಕ್ ಮತ್ತು ಸದಸ್ಯರಾದ ರಾಮನಾಥ ನಾಯಕ್ ಹಾಗು ನಾಗೇಂದ್ರ ಪೈ, ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಜಿ ವಿಶ್ವನಾಥ್ ಭಟ್ ಉಪಸ್ಥಿತರಿದ್ದರು ಪ್ರೌಢಶಾಲಾ ವಿಭಾಗದ ನಿಯೋಜಿತ ಪ್ರಭಾರ ಮುಖ್ಯ ಶಿಕ್ಷಕ ಗೋಪಾಲ ದೇವಾಡಿಗ ಸ್ವಾಗತಿಸಿ, ಶಿಕ್ಷಕಿ ಲವೀನ ಸಾವಿಯಾ ಸಿಕ್ವೇರಾ ಪರಿಚಯಿಸಿದರು. ಶಿಕ್ಷಕಿ ಶ್ರೀಲತಾ ವಂದಿಸಿದರು. ಶಿಕ್ಷಕ ಆದಿನಾಥ ಕಿಣಿ ಕಾರ್ಯಕ್ರಮ ನಿರೂಪಿಸಿದರು.