Monday, January 20, 2025
Monday, January 20, 2025

ಜ.14: ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಉಡುಪಿ ಜಿಲ್ಲಾಮಟ್ಟದ ಸ್ಪರ್ಧೆ

ಜ.14: ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಉಡುಪಿ ಜಿಲ್ಲಾಮಟ್ಟದ ಸ್ಪರ್ಧೆ

Date:

ತೆಂಕನಿಡಿಯೂರು, ಜ.9: ಇಲ್ಲಿನ ಶ್ರೀ ಕಾಳಿಕಾಂಬಾ ಭಜನಾ ಸಂಘದ ವತಿಯಿಂದ ಜನವರಿ 14 ರವಿವಾರ ಮಕರ ಸಂಕ್ರಾಂತಿ ವಿಶೇಷ ಕಾರ್ಯಕ್ರಮವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಯ 6 ಮತ್ತು 7ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಭಕ್ತಿಗೀತೆ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಉಡುಪಿ ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ, ಭಾವಗಾನ ಸ್ಪರ್ಧೆ, ಕಾಲೇಜು ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಸ್ಪರ್ಧೆ, ಭಾಷಣ ಸ್ಪರ್ಧೆ. ವಿಷಯ: ‘ಆಧುನಿಕತೆ, ವೈಜ್ಞಾನಿಕ ಮನೋಭಾವ, ಯುವಜನತೆ’ (4+1 ನಿಮಿಷಗಳು)

ಆಸಕ್ತರು ಸ್ಪರ್ಧಾ ದಿನದಂದು ಬೆಳಗ್ಗೆ 9 ರಿಂದ 9.30 ಗಂಟೆಯ ಒಳಗೆ ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ನೋಂದಣಿ ಮಾಡಬೇಕು. ಪ್ರತಿ ಸ್ಪರ್ಧೆಗೆ ಒಂದು ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿಗಳಿಗೆ, ಹಾಗೂ ರಸಪ್ರಶ್ನೆ ಸ್ಪರ್ಧೆಗಳಿಗೆ ಪ್ರತಿ ಸಂಸ್ಥೆಯಿಂದ ಇಬ್ಬರು ವಿದ್ಯಾರ್ಥಿಗಳನ್ನೊಳಗೊಂಡ ಒಂದು ತಂಡಕ್ಕೆ ಮಾತ್ರ ಅವಕಾಶ. ಚಿತ್ರಕಲಾ ಸ್ಪರ್ಧೆಗೆ ವಿಷಯವನ್ನು ಸ್ಥಳದಲ್ಲೇ ನೀಡಲಾಗುವುದು. ಸ್ಪರ್ಧಾ ವಿಜೇತರಿಗೆ ಅದೇ ದಿನ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ನಗದು ಬಹುಮಾನ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ 9964024066 ಸಂಪರ್ಕಿಸಬೇಕಾಗಿ ಸಂಘದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!