Monday, January 20, 2025
Monday, January 20, 2025

ಕುಂದಾಪುರ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

ಕುಂದಾಪುರ: ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ

Date:

ಉಡುಪಿ, ಜ.10: ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ 1989ರ ಕಲಂ 221(ಎ)(2) (5) ರ ಅನ್ವಯ ವಾಹನ ದಟ್ಟನೆ ಇರುವ ಈ ಕೆಳಕಂಡ ಮಾರ್ಗಗಳ ರಸ್ತೆಗಳಲ್ಲಿ ಏಕಮುಖ ಸಂಚಾರ ರಸ್ತೆ ಹಾಗೂ ಘನ ವಾಹನಗಳ ಸಂಚಾರ ನಿಷೇಧ ರಸ್ತೆಯನ್ನಾಗಿ ಮಾರ್ಪಡಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಕುಂದಾಪುರ ಪುರಸಭಾ ವ್ಯಾಪ್ತಿಯ ಚಿಕ್ಕನ್ ಸ್ಟಾಲ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಮಾಸ್ತಿಕಟ್ಟೆ ರಸ್ತೆಯಲ್ಲಿ ಪಶ್ಚಿಮದಿಂದ ಪೂರ್ವಕ್ಕೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಪೂರ್ವದಿಂದ ಪಶ್ಚಿಮಕ್ಕೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಕುಂದಾಪುರ ಶಾಸ್ತ್ರಿ ಸರ್ಕಲ್‌ನಿಂದ ಹೊಸ ಬಸ್ ನಿಲ್ದಾಣದ ವರೆಗೆ ಪುರಸಭೆ ರಸ್ತೆಯ ಪಶ್ಚಿಮ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ಉತ್ತರಾಭಿಮುಖವಾಗಿ ಸಂಚರಿಸಬೇಕು. ಹೊಸ ಬಸ್ ನಿಲ್ದಾಣದಿಂದ ಶಾಸ್ತ್ರಿ ಪಾರ್ಕ್ ವರೆಗೆ ಪುರಸಭೆಯ ಪೂರ್ವ ಬದಿಯ ರಸ್ತೆಯಲ್ಲಿ ಎಲ್ಲಾ ವಾಹನಗಳು ದಕ್ಷಿಣಾಭಿಮುಖವಾಗಿ ಸಂಚರಿಬೇಕು.

ಕುಂದಾಪುರ ಪುರಸಭೆ ವ್ಯಾಪ್ತಿಯ ಬೇಗಂ ಹಜರತ್ ಮಹಲ್ ರಸ್ತೆ (ಸಟ್ಟಾಡಿ ಡಿಪಾರ್ಟ್ಮೆಂಟಲ್ ಸ್ಟೋರ್ ಪಕ್ಕದ ರಸ್ತೆ)ಯು ಪುರಸಭೆ ರಸ್ತೆಯ ಪೂರ್ವಕ್ಕೆ ರಾ.ಹೆ 66 ಕ್ಕೆ ಕೂಡು ರಸ್ತೆಯಾಗಿ ಹಾದುಹೋಗಿರುವ ಕಿರಿದಾದ ರಸ್ತೆಯಾಗಿದ್ದು, ಈ ರಸ್ತೆಯಲ್ಲಿ ಪುರಸಭೆ ರಸ್ತೆಯ ಪಶ್ಚಿಮದಿಂದ ಪೂರ್ವಕ್ಕೆ ರಾ.ಹೆ.66 ಕಡೆಗೆ ವಾಹನಗಳನ್ನು ಸಂಚರಿಸಲು ಹಾಗೂ ಪೂರ್ವದಿಂದ ಪಶ್ಚಿಮಕ್ಕೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿರುತ್ತದೆ. ಕುಂದಾಪುರ ಪುರಸಭೆ ವ್ಯಾಪ್ತಿಯ ಗ್ರ್ಯಾಂಡ್ ಶಿವಪ್ರಸಾದ್ ಪಕ್ಕದ ರಸ್ತೆ ಕಿರಿದಾಗಿದ್ದು, ಈ ರಸ್ತೆಯು ಪೂರ್ವಕ್ಕೆ ರಾ.ಹೆ. 66 ನ್ನು ಸಂಪರ್ಕಿಸಿದೆ. ಈ ರಸ್ತೆಯಲ್ಲಿ ಪೂರ್ವದಿಂದ ಪಶ್ಚಿಮಕ್ಕೆ ಪುರಸಭೆಯ ಮುಖ್ಯ ರಸ್ತೆಗೆ ವಾಹನಗಳು ಸಂಚರಿಸಲು ಹಾಗೂ ಪುರಸಭಾ ರಸ್ತೆಯಿಂದ ರಾ.ಹೆ. 66 ರ ಕಡೆಗೆ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!