Monday, January 20, 2025
Monday, January 20, 2025

ಸರಳಬೆಟ್ಟು ವಸತಿ ಸಮುಚ್ಚಯ ಫಲಾನುಭವಿಗಳಿಗೆ ಹಸ್ತಾಂತರಕ್ಕೆ ಸಿದ್ಧ: ಯಶ್ಪಾಲ್ ಸುವರ್ಣ

ಸರಳಬೆಟ್ಟು ವಸತಿ ಸಮುಚ್ಚಯ ಫಲಾನುಭವಿಗಳಿಗೆ ಹಸ್ತಾಂತರಕ್ಕೆ ಸಿದ್ಧ: ಯಶ್ಪಾಲ್ ಸುವರ್ಣ

Date:

ಉಡುಪಿ, ಜ.10: ಉಡುಪಿ ನಗರಸಭೆ ವತಿಯಿಂದ ಹೆರ್ಗ ಗ್ರಾಮದ ಸರಳಬೆಟ್ಟುವಿನಲ್ಲಿ ನಿರ್ಮಾಣಗೊಂಡ ವಸತಿ ಸಮುಚ್ಚಯದ ಕಾಮಗಾರಿ ಸಂಪೂರ್ಣಗೊಂಡು ಇದೀಗ ಫಲಾನುಭವಿಗಳಿಗೆ ಹಸ್ತಾಂತರಿಸಲು ಸಿದ್ಧವಾಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ. ಉಡುಪಿ ನಗರಸಭೆಯ ಸತ್ಯಮೂರ್ತಿ ಸ್ಮಾರಕ ಸಭಾಭವನದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಕೊಳಗೇರಿ ಅಭಿವೃದ್ದಿ ಮಂಡಳಿ ಅಧಿಕಾರಿಗಳು, ಗುತ್ತಿಗೆದಾರ ಕಂಪೆನಿ ಪ್ರತಿನಿಧಿಗಳು ಹಾಗೂ ಬ್ಯಾಂಕ್ ಆಫ್ ಬರೋಡಾದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಶೀಘ್ರವಾಗಿ ಮನೆ ಹಸ್ತಾಂತರಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಿದರು.

ನಗರಸಭೆ ಹಾಗೂ ಕೊಳಗೇರಿ ಅಭಿವೃದ್ದಿ ಮಂಡಳಿ ಜಂಟಿಯಾಗಿ ನಿರ್ಮಿಸಿದ ಈ ಯೋಜನೆಯಲ್ಲಿ 240 ಮಂದಿ ಫಲಾನುಭವಿಗಳಿಗೆ ಮನೆ ಮಂಜೂರುಗೊಂಡಿದ್ದು ಈಗಾಗಲೇ ಹಲವು ಮಂದಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿದ್ದಾರೆ. 29 ಮಂದಿ ಫಲಾನುಭವಿಗಳು ಪೂರಕ ದಾಖಲೆಗಳ ಸಮಸ್ಯೆಯಿಂದ ಬ್ಯಾಂಕ್ ಲೋನ್ ಪ್ರಕ್ರಿಯೆ ಬಾಕಿ ಇದ್ದು, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಸಾಲ ಮಂಜೂರಾತಿಗೆ ಸಹಕರಿಸುವಂತೆ ಬ್ಯಾಂಕ್ ಅಧಿಕಾರಿಗಳಿಗೆ ಹೇಳಿದರು. ಸಭೆಯಲ್ಲಿ ಪೌರಾಯುಕ್ತ ರಾಯಪ್ಪ, ನಗರಸಭೆಯ ಸದಸ್ಯರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!