Tuesday, January 21, 2025
Tuesday, January 21, 2025

ಅಮೃತ ಭಾರತ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಗೆ ಉಡುಪಿ ರೈಲು ನಿಲ್ದಾಣ ಆಯ್ಕೆ

ಅಮೃತ ಭಾರತ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಗೆ ಉಡುಪಿ ರೈಲು ನಿಲ್ದಾಣ ಆಯ್ಕೆ

Date:

ಉಡುಪಿ, ಜ. 11: ಭಾರತದ ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರಕಾರ ಪ್ರಾರಂಭಿಸಿದ ಅಮೃತ ಭಾರತ ರೈಲು ನಿಲ್ದಾಣಗಳ ಅಭಿವೃದ್ಧಿ ಯೋಜನೆಯಡಿ ಉಡುಪಿ ರೈಲ್ವೆ ನಿಲ್ದಾಣ ಆಯ್ಕೆಯಾಗಿದೆ. ಈ ಬಗ್ಗೆ ಪ್ರಸ್ತಾಪಿಸಿದ್ದ ಕೇಂದ್ರ ಸಚಿವೆ ಹಾಗೂ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹರ್ಷ ವ್ಯಕ್ತಪಡಿಸಿದ್ದಾರೆ.

ಭಾರತೀಯ ರೈಲ್ವೆ ನರೇಂದ್ರ ಮೋದಿ ಹಾಗೂ ಅಶ್ವಿನಿ ವೈಷ್ಣವ್ ನೇತೃತ್ವದಲ್ಲಿ ಅಭೂತಪೂರ್ವ ಪ್ರಗತಿಯತ್ತ ದಾಪುಗಾಲಿಕ್ಕುತ್ತಿರುವ ಈ ಸುಸಂದರ್ಭದಲ್ಲಿ ಅಮೃತ್ ಭಾರತ್ ಯೊಜನೆಯ ಮೂಲಕ  ಉಡುಪಿ ರೈಲು ನಿಲ್ದಾಣವನ್ನು ಸಂಪೂರ್ಣ ಆಧುನೀಕರಿಸಿ ವಿಶ್ವದರ್ಜೆಯ ಪ್ರಯಾಣಿಕ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗಲಿದೆ. ತನ್ಮೂಲಕ ಶೈಕ್ಷಣಿಕ ಕೇಂದ್ರ ಮಣಿಪಾಲ, ಧಾರ್ಮಿಕ ಕೇಂದ್ರ ಉಡುಪಿ ಹಾಗೂ ಬಂದರು ನಗರಿ ಮಲ್ಪೆಗೆ ಸಂಬಂಧಿಸಿದ ಪ್ರಯಾಣಿಕರಿಗೆ ಬಹಳಷ್ಟು ಅನುಕೂಲವಾಗಲಿದೆ. ಅಮೃತ್ ಭಾರತ್ ಕಾಮಗಾರಿಯನ್ನು ಶೀಘ್ರವಾಗಿ ಪ್ರಾರಂಭಿಸಲು ರೈಲ್ವೆ ಇಲಾಖೆಗೆ ಸೂಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!