Thursday, October 15, 2026
Thursday, October 15, 2026

ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕಾಂಗ್ರೆಸ್ ಖಂಡನಾ ನಿರ್ಣಯ

ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಕಾಂಗ್ರೆಸ್ ಖಂಡನಾ ನಿರ್ಣಯ

Date:

ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಬಗ್ಗೆ ಇತ್ತೀಚೆಗೆ ದುರುದ್ದೇಶಪೂರಿತ ಅವಹೇಳನಕಾರಿ ಹೇಳಿಕೆ ನೀಡಿ ಠೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಇಲ್ಲಿನ ಪ್ರಕಾಶ್ ಹೊಟೇಲ್ ಸಭಾಂಗಣದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿವರ ಅಧ್ಯಕ್ಷತೆಯಲ್ಲಿ ನಡೆದ ಹೆಬ್ರಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು.

ಇತಿಹಾಸ ತಿಳಿಯದವರಿಂದ ಇತಿಹಾಸ ನಿರ್ಮಿಸಲು ಸಾಧ್ಯವಿಲ್ಲ. ತನ್ನ ನೈಜ ಯೋಗ್ಯತೆಗೆ ಮಿಕ್ಕಿದ ಹುದ್ದೆಯ ಅಮಲಿನಲ್ಲಿ ಜಗತ್ತೆಲ್ಲ ಡ್ರಗ್ ಎಡಿಕ್ಟ್ ಆದಂತೆ ಕಾಣುವ ಅಪ್ರಬುದ್ಧ ಮನಸ್ಥಿತಿಯ ಬಿಜೆಪಿ ರಾಜ್ಯಾದ್ಯಕ್ಷರಿಗೆ ನೆಹರೂ ಕುಟುಂಬದ ಹಿನ್ನೆಲೆ ತಿಳಿದಿಲ್ಲ. ಮಹಾತ್ಮಾ ಗಾಂಧೀ ತತ್ವ ಸಿದ್ಧಾಂತದಡಿ ಸಾಮಾನ್ಯರಲ್ಲಿ ಸಾಮಾನ್ಯನಂತೆ ಪ್ರಜಾತಂತ್ರಕ್ಕೊಪ್ಪುವ ರಾಜನೀತಿಯ ನಡೆಯ, ಆಕ್ಸ್ಫರ್ಡ್ ಶಿಕ್ಷಣ ಪಡೆದಿರುವ ರಾಹುಲ್ ಗಾಂಧಿಯನ್ನು ಅರ್ಥ ಮಾಡಿಕೊಳ್ಳುವ ಶಕ್ತಿಯೂ ಈ ಕಟೀಲರಿಗಿಲ್ಲ. ಇಂತಹ ಬೇಜವಾಬ್ಧಾರಿ ಹೇಳಿಕೆಗಳು ಮುಂದುವರಿದಲ್ಲಿ ಇವರ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎನ್ನುವ ಖಂಡನಾ ನಿರ್ಣಯವನ್ನು ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ರವರ ಸಮಕ್ಷಮದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಮಂಡಿಸಿದರು.

ಹೆಬ್ರಿ ಬ್ಲಾಕ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ ಅನುಮೋದಿಸಿದರು. ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಕೋಟ್ಯಾನ್, ಹಿರಿಯ ನ್ಯಾಯವಾದಿ ಶೇಖರ ಮಡಿವಾಳ, ವಿವಿಧ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!