Sunday, January 19, 2025
Sunday, January 19, 2025

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ: ಯಶ್ಪಾಲ್ ಸುವರ್ಣ ಮನವಿ

ಕರಾವಳಿ ಜಿಲ್ಲೆಗಳ ಮೀನುಗಾರಿಕೆ ಅಭಿವೃದ್ಧಿಗೆ ಬಜೆಟ್ ನಲ್ಲಿ ವಿಶೇಷ ಯೋಜನೆ: ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ: ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಮೀನುಗಾರರ ಹಲವು ಬೇಡಿಕೆಗಳನ್ನು ಪೂರೈಸುವ ನಿಟ್ಟಿನಲ್ಲಿ ಮುಂಬರುವ 2022- 23ನೇ ಸಾಲಿನ ಬಜೆಟ್ ನಲ್ಲಿ ವಿಶೇಷ ಯೋಜನೆ ರೂಪಿಸುವಂತೆ ಕರಾವಳಿ ಜಿಲ್ಲೆಯ ಸಮಸ್ತ ಮೀನುಗಾರರ ಪರವಾಗಿ ಮೀನುಗಾರಿಕೆ ಸಚಿವರಾದ ಅಂಗಾರ ರವರಿಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ಮನವಿ ಮಾಡಿದ್ದಾರೆ.

ಮೀನುಗಾರಿಕೆ ಸಚಿವರ ಅಧ್ಯಕ್ಷತೆಯಲ್ಲಿ ಜರಗಿದ ಮೀನುಗಾರಿಕೆ ಇಲಾಖೆಯ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮೀನುಗಾರರ ಬಹುದಿನಗಳ ಬೇಡಿಕೆಗಳಾದ ರಾಜ್ಯ ಮಾರಾಟ ಕರಮುಕ್ತ ಡೀಸೆಲ್ ಕೋಟಾ ಹೆಚ್ಚಳ, ಸೀ ಆಂಬ್ಯುಲೆನ್ಸ್ ಮತ್ತು ತುರ್ತು ಚಿಕಿತ್ಸಾ ಘಟಕ, ಕಾಪು ತೀರದಲ್ಲಿ ನಾಡದೋಣಿ ತಂಗಲು ಇಳಿದಾಣ ಕೇಂದ್ರ, ಬಂದರು ಹೂಳು ತೆಗೆಯಲು ಇಲಾಖೆ ವತಿಯಿಂದ ಡ್ರೆಜ್ಜರ್ ಖರೀದಿ, ಮೀನುಗಾರರಿಗೆ 1 ಲಕ್ಷದ ವರೆಗೆ ಶೂನ್ಯ ಬಡ್ಡಿದರ ಸಾಲ ಯೋಜನೆ, ನಾಡ ದೋಣಿಗಳಿಗೆ ಸೀಮೆ ಏಣ್ಣೆ ಪ್ರಮಾಣ ಹೆಚ್ಚಳ, ನಾಡ ದೋಣಿಗಳಿಗೆ ಇಲೆಕ್ಟ್ರಿಕಲ್ ಇಂಜಿನ್ ಪರಿವರ್ತನೆಗೆ ಸಹಾಯಧನ, ಮೀನುಗಾರರ ಸಹಕಾರಿ ಸಂಘಗಳ ಸಾಲ ಮನ್ನಾ, ಮತ್ಸ್ಯ ಮಹಿಳಾ ಸ್ವಾವಲಂಬನೆ ಯೋಜನೆ ಸಹಿತ ಹಲವು ಯೋಜನೆಗಳಿಗೆ ಬಜೆಟ್ ನಲ್ಲಿ ಅನುದಾನ ಒದಗಿಸಿ ಮೀನುಗಾರಿಕೆ ಅಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದರು.

ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸಲ್ಮಾ, ನಿರ್ದೇಶಕರಾದ ರಾಮಾಚಾರ್ಯ, ಅಪರ ನಿರ್ದೇಶಕರಾದ ತಿಪ್ಪೇಸ್ವಾಮಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದಿನೇಶ್ ಎಂ ಕೆ., ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಕುಮಾರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...

ಜ. 19-21 ರವರೆಗೆ ನಾಟಕೋತ್ಸವ ಪ್ರದರ್ಶನ

ಉಡುಪಿ, ಜ.19: ಕಾರ್ಕಳ ಯಕ್ಷ ರಂಗಾಯಣ ಇವರ ವತಿಯಿಂದ ಜನವರಿ 19...

ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ

ಉಡುಪಿ, ಜ.19: ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ...
error: Content is protected !!