Saturday, July 25, 2026
Saturday, July 25, 2026

ಮಣಿಪಾಲ- ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ

ಮಣಿಪಾಲ- ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ

Date:

ಮಣಿಪಾಲ: ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ್ ವಸ್ತುಗಳ ಬಳಕೆಯು ದಿನೆ ದಿನೇ ಹೆಚ್ಚುತ್ತಿದ್ದು ಇದರಿಂದ ಅವುಗಳ ಅಳವಡಿಗೆ ಮತ್ತು ದುರಸ್ತಿಗೆ ಬೇಕಾಗುವ ಟೆಕ್ನಿಷಿಯನ್‌ಗಳಿಗೂ ಉತ್ತಮ ಬೇಡಿಕೆ ಬಂದಿದೆ. ಉತ್ತಮ ನುರಿತ ತರಬೇತಿ ಪಡೆದ ಕೆಲಸಗಾರರಿಗೆ ಹೆಚ್ಚಿನ ಅವಕಾಶಗಳು ದೊರೆಯುತ್ತಿವೆ. ಸ್ವಂತ ಉದ್ಯಮಿಯಾಗಿ ಈ ಕ್ಷೇತ್ರದಲ್ಲಿ ದುಡಿಯಬಹುದು ಮತ್ತು ಇತರರಿಗೆ ಕೆಲಸವನ್ನು ನೀಡುವಂತಾಗಬಹುದು ಎಂದು ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಸುಷ್ಮಾ ಜಿ. ಭಂಡಾರಿ ಹೇಳಿದರು.

ಅವರು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಆಸಕ್ತ ಶಿಬಿರಾರ್ಥಿಗಳಿಗಾಗಿ 30 ದಿನಗಳ ಕಾಲ ಹಮ್ಮಿಕೊಂಡ ಟಿವಿ ಟೆಕ್ನಿಷಿಯನ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಪ್ರಮಾಣ ಪತ್ರವನ್ನು ವಿತರಿಸಿ ಮಾತನಾಡಿದರು.

ಸಂಸ್ಥೆಯ ನಿರ್ದೇಶಕರಾದ ಸವಿತಾ ಎಸ್ ನಾಯಕ್ ಸ್ವಾಗತಿಸಿ, ಸಂಸ್ಥೆಯ ಕಛೇರಿ ಸಹಾಯಕರಾದ ಸಂತೋಷ್ ವಂದಿಸಿದರು. ಶಿಬಿರಾರ್ಥಿಗಳಾದ ಮಿಥುನ್, ರಕ್ಷಿತಾ ಮತ್ತು ಪ್ರಜ್ವಲ್ ತರಬೇತಿಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!