Friday, November 13, 2026
Friday, November 13, 2026

ವಾರ್ಷಿಕ ಕ್ರೀಡಾಕೂಟ

ವಾರ್ಷಿಕ ಕ್ರೀಡಾಕೂಟ

Date:

ಕುಂದಾಪುರ‌, ಜ.17: ಕುಂದಾಪುರ ಎಜ್ಯುಕೇಶನ್‌ ಸೊಸೈಟಿ ಪ್ರವರ್ತಿತ ಎಚ್‌ ಎಮ್‌ ಎಮ್‌ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿಕೆಆರ್‌ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು ಕುಂದಾಪುರದ ಗಾಂಧಿ ಮೈದಾನದಲ್ಲಿ ಜರುಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ, ಸಂಸ್ಥೆಯ ಸಂಚಾಲಕರಾದ ಬಿ. ಎಂ ಸುಕುಮಾರ ಶೆಟ್ಟಿಯವರು ಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್‌ ಸೊಸೈಟಿಯ ಕಾರ್ಯದರ್ಶಿ ಸೀತಾರಾಮ ನಕ್ಕತ್ತಾಯ ಬಲೂನನ್ನು ನಭದೆಡೆಗೆ ಹಾರಿ ಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ರೀಡಾಕೂಟದ ಮುಖ್ಯ ಅತಿಥಿಯಾಗಿ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿಯ ಸೀನಿಯರ್ ಮ್ಯಾನೇಜರ್ ಪ್ರಭಾಕರ ಶೆಟ್ಟಿ ಶುಭ ಹಾರೈಸಿದರು. ರಾಷ್ಟ್ರಮಟ್ಟದ ಅನೇಕ ಕ್ರೀಡೆಗಳನ್ನು ಪ್ರತಿನಿಧಿಸಿರುವ ವಿದ್ಯಾರ್ಥಿಗಳು ಕ್ರೀಡಾಜ್ಯೋತಿ ಬೆಳಗಿದರು. ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ನಡೆಯಿತು.

ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ ಎನ್., ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ ಆಚಾರ್‌ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಸಹಾಯಕ ಮುಖ್ಯ ಶಿಕ್ಷಕಿ ಆರತಿ ಶೆಟ್ಟಿ ಹಾಗೂ ಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ಮುಂತಾದವರು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಭಾವನಾ, ಶ್ವೇತಾ, ದಿವ್ಯ ಎನ್ ಮತ್ತು ಶಿಕ್ಷಕ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್‌ರ ಸಹಯೋಗದೊಂದಿಗೆ ಕ್ರೀಡಾಕೂಟ ಸಂಪನ್ನಗೊಂಡಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಐಪಿಎಸ್ ಅಧಿಕಾರಿ ಐ. ಜಯಕುಮಾರ್ ಭೇಟಿ

ಕಾಪು, ನ.13: ಮುಂಬೈ ಪೊಲೀಸ್ ಇಲಾಖೆಯ ಫೋರ್ಸ್ ಒನ್ ಘಟಕದ ವಿಶೇಷ...

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು: ಆಹಾರ ಮೇಳದಲ್ಲಿ ಭರ್ಜರಿ ವಹಿವಾಟು

ಉಡುಪಿ, ನ.13: ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿಯ ವಾಣಿಜ್ಯ ಸಂಘದ...

ಕಟಪಾಡಿ: 1 ಕೋಟಿ 10 ಲಕ್ಷ ರೂಪಾಯಿ ವೆಚ್ಚದ ವಿವಿಧ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

ಕಟಪಾಡಿ, ನ.13: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಶ್ರೀ ಕ್ಷೇತ್ರ ಶಂಕರಪುರ: ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆ

ಕಟಪಾಡಿ, ನ.13: ಉಡುಪಿ ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ...
error: Content is protected !!