Sunday, January 19, 2025
Sunday, January 19, 2025

ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

Date:

ಉಡುಪಿ, ಜ. 19: ಪರ್ಯಾಯ ಶ್ರೀಪುತ್ತಿಗೆ ಮಠ ಮತ್ತು ಕೊಡವೂರಿನ ಉಡುಪರತ್ನ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ವಿಶ್ವಗೀತಾ ಪರ್ಯಾಯದ ಅಂಗವಾಗಿ ‘ಸಪ್ತಸಾಗರದಾಚೆ ಪುತ್ತಿಗೆ ಶ್ರೀಗಳ ದೈವಿಕ ಸಚಿತ್ರ ದಿನಚರಿ’ ಛಾಯಾಚಿತ್ರ ಪ್ರದರ್ಶನವನ್ನು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜನವರಿ18 ರಂದು ಉದ್ಘಾಟನೆಗೊಂಡಿತು. ಜಪಾನಿನ ರಿಸ್ಸೋ ಕೊಸೈ ಕೋಯ್ ಸಂಸ್ಥೆಯ ನಿಯೋಜಿತ ಅಧ್ಯಕ್ಷೆ ರೆ. ಕೋಶೊ ನಿವಾನೋ ಪ್ರದರ್ಶನವನ್ನು ಉದ್ಘಾಟಿಸಿದರು. ಆಸ್ಟ್ರೇಲಿಯಾ, ವಿಕ್ಟೋರಿಯಾದ ಮಾಜಿ ಸಚಿವ, ಲ್ಯೂಕ್ ಡನೆಲನ್ , ಮಣಿಪಾಲ ಮೀಡಿಯ ನೆಟ್ ವರ್ಕ್ ಕಾರ್ಯನಿರ್ವಾಹಕ ನಿರ್ದೇಶಕ ಅಧ್ಯಕ್ಷ ಸತೀಶ್ ಯು ಪೈ, ತರಂಗ ವಾರಪತ್ರಿಕೆಯ ಸಂಪಾದಕ ಸಂಧ್ಯಾ ಎಸ್ ಪೈ, ಮಾಜಿ ಸಚಿವ ಬಸನಗೌಡ ಯತ್ನಾಳ್, ಗಾಲಿ ಜನಾರ್ದನ್ ರೆಡ್ಡಿ, ಮಾಜಿ ಶಾಸಕ ಕೆ. ರಘುಪತಿ ಭಟ್, ಪುತ್ತಿಗೆ ಮಠದ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರಂಜನ್ ಕಲ್ಕೂರ, ಕೊಡವೂರಿನ ಉಡುಪ ರತ್ನ ಪ್ರತಿಷ್ಠಾನದ ವಿಶ್ವಸ್ಥ ಜನಾರ್ದನ ಕೊಡವೂರ್ ಮತ್ತಿತರು ಉಪಸ್ಥಿತರಿದ್ದರು.

ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹಾಗೂ ಕಿರಿಯಪಟ್ಟದ ಯತಿಗಳಾದ ಶ್ರೀ ಸುಶ್ರೀಂದ್ರದ್ರ ತೀರ್ಥ ಶ್ರೀಪಾದರು ಆಶೀರ್ವದಿಸಿದರು. ಉದಯವಾಣಿ ಪತ್ರಿಕೆಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೋ ಮೋಹನ್ ಅವರು ತಮ್ಮ ಅಮೆರಿಕ ಪ್ರವಾಸದಲ್ಲಿ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಕುರಿತು ನಿರ್ಮಿಸಿದ ಛಾಯಾಚಿತ್ರಗಳನ್ನು ಇಲ್ಲಿ ಪ್ರಸ್ತುತಪಡಿಸಲಾಗಿದೆ. ಫಿನಿಕ್ಸ್ ವೆಂಕಟಕೃಷ್ಣ ದೇವಸ್ಥಾನದಲ್ಲಿ ಯತಿಗಳ ನಿತ್ಯ ಪೂಜೆಯನ್ನು ಇಲ್ಲಿ ಛಾಯಾಚಿತ್ರಗಳ ಮೂಲಕ ಸೆರೆ ಹಿಡಿಯಲಾಗಿದ್ದು, ಒಟ್ಟು 36 ಚಿತ್ರಗಳ ಪ್ರದರ್ಶನ ಏರ್ಪಡಿಸಲಾಗಿದೆ. ಸಾರ್ವಜನಿಕರು ಜನವರಿ 24ರ ವರೆಗೆ ಪ್ರದರ್ಶನವನ್ನು ವೀಕ್ಷಿಸಬಹುದಾಗಿದೆ. ಗೋಪಾಲ ಆಚಾರ್ಯ ನಿರೂಪಿಸಿ, ಮೋಹನ ಉಡುಪ ವಂದಿಸಿದರು. ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!