Sunday, January 19, 2025
Sunday, January 19, 2025

ಶಿರ್ವ- ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ

ಶಿರ್ವ- ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ

Date:

ಶಿರ್ವ: ಸಂತ ಮೇರಿ ಕಾಲೇಜು ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಸ್ತ್ರಾಸ್ತ್ರಗಳನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್‍ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ. ಮುಂದೆ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದರು. ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ ರೇಂಜ್ ನಲ್ಲಿ ನಡೆದಂತ ಬೆಸ್ಟ್ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿದ ಕೆಡೆಟ್ ಆಶಿಶ್ ಪ್ರಸಾದ್ ಮತ್ತು ಇತರ ಕ್ಯಾಡೆಟ್ ಗಳನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ತರಬೇತಿಯ ಮುಖ್ಯ ಉದ್ದೇಶ ಮತ್ತು ಪ್ರಯೋಜನವನ್ನು ತಿಳಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು

ಸಂಪನ್ಮೂಲ ವ್ಯಕ್ತಿಗಳಾದ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಹವಾಲ್ದಾರ್ ಜೆಸಿಓ ಟಿಸೆರಿಂಗ್ ಆಂಗ್ಚೋಕ್, ಸಂತೋಷ್ ಕುಮಾರ್, ಎನ್ಸಿಓ ಗುರು ಪಾಲ್ ಸಿಂಗ್ ಭೂ-ಯುವ ಸೇನಾದಳದ ಕೆಡೆಟ್‍ಗಳನ್ನು ಎನ್.ಸಿ.ಸಿ. ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಜೊತೆಗೆ ಕವಾಯತು, ಭೂಪಟ ಅಧ್ಯಯನ, ಫೈರಿಂಗ್ ಅಣಕುಯುದ್ಧ, ಶಸ್ತ್ರಗಳನ್ನು ಹೇಗೆ ನಿರ್ವಹಣೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿ ತರಬೇತಿ ನಡೆಸಿಕೊಟ್ಟರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉಪನ್ಯಾಸಕಿ ಯಶೋಧ, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು. ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್, ಕಾರ್ಪೋರಲ್ ಧೀರಜ್, ಅನುಪ್ ನಾಯಕ ಮತ್ತಿತರರು ಸಹಕರಿಸಿದರು. ಕ್ಯಾಡೆಟ್ ಜನಿಸಿಯಾ ನೊರೊನ್ಹಾ ಸ್ವಾಗತಿಸಿ,ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ವಂದಿಸಿದರು. ಕ್ಯಾಡೆಟ್ ಎಲ್ರುಷಾ ಮಿಲಿನಾ ಡೇಸ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!