Tuesday, January 28, 2025
Tuesday, January 28, 2025

ಉಪಲೋಕಾಯುಕ್ತ ನ್ಯಾಯಮೂರ್ತಿಯಿಂದ ಅಹವಾಲು ಸ್ವೀಕಾರ

ಉಪಲೋಕಾಯುಕ್ತ ನ್ಯಾಯಮೂರ್ತಿಯಿಂದ ಅಹವಾಲು ಸ್ವೀಕಾರ

Date:

ಉಡುಪಿ, ಜ.22: ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಫೆಬ್ರವರಿ 3 ರಿಂದ 5 ರ ವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಫೆ.3 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮ.2.30 ರಿಂದ 5 ಗಂಟೆಯ ವರೆಗೆ ಮಣಿಪಾಲ್‌ನ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ನಡೆಸಲಿದ್ದಾರೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ ಹಾಗೂ ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬ ಆಗಿದ್ದಲ್ಲಿ ಅಥವಾ ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ರೀತಿಯ ದುರಾಡಳಿತದಲ್ಲಿ ತೊಡಗಿದ್ದರೆ, ತೊಂದರೆಗೆ ಒಳಗಾದ ಸಾರ್ವಜನಿಕರು ಲಿಖಿತ ರೂಪದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

ಫೆ.5 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು 2.30 ರಿಂದ ಸಂಜೆ 5 ಗಂಟೆಯ ವರೆಗೆ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲೆಗೆ ಸಂಬಂಧಪಟ್ಟ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ವಿಚಾರಣೆ/ ತನಿಖೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತಿಯ ವಿಚಾರಣೆಯನ್ನು ನಡೆಸಲಾಗುತ್ತದೆ. ದೂರುದಾರರು ನಿಗದಿತ ಸಮಯದಲ್ಲಿ ಸಭೆಯಲ್ಲಿ ಹಾಜರಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!