Saturday, September 21, 2024
Saturday, September 21, 2024

ಕೃಷಿ ನವೋದ್ಯಮ ಯೋಜನೆ: ಅರ್ಜಿ ಆಹ್ವಾನ

ಕೃಷಿ ನವೋದ್ಯಮ ಯೋಜನೆ: ಅರ್ಜಿ ಆಹ್ವಾನ

Date:

ಉಡುಪಿ, ಜ.23: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣಭಾಗದ ಯುವಕರಿಗೆ ಉದ್ಯೋಗ ಸೃಜನೆಗಾಗಿ ಕೃಷಿಯಲ್ಲಿನ ನೂತನ ತಾಂತ್ರಿಕತೆಗಳು ಹಾಗೂ ನವೀನ ಪರಿಕಲ್ಪನೆಗಳ ವಾಣಿಜ್ಯೀಕರಣವನ್ನು ಉತ್ತೇಜಿಸಲು ಕೃಷಿ ನವೋದ್ಯಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲಾಗುವ ಕೃಷಿ ನವೋದ್ಯಮಗಳ ಪೈಕಿ ಅರ್ಹ ನವೋದ್ಯಮಗಳನ್ನು ವಿವಿಧ ಹಂತಗಳಲ್ಲಿ ಪರಿಶೀಲನೆ ನಡೆಸಿ, ಹೊಸ ಕೃಷಿ ನವೋದ್ಯಮಗಳಿಗೆ ಶೇ. 50ರಷ್ಟು ಕನಿಷ್ಠ 5 ಲಕ್ಷ ರೂ. ಗಳಿಂದ ಗರಿಷ್ಠ 20 ಲಕ್ಷ ರೂ. ಹಾಗೂ ಈಗಾಗಲೇ ಸ್ಥಾಪಿಸಲಾದ ಕೃಷಿ ನವೋದ್ಯಮಗಳ ವಿಸ್ತರಣೆಗೆ ಕನಿಷ್ಠ 20 ಲಕ್ಷ ರೂ.ಗಳಿಂದ ಗರಿಷ್ಠ 50 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುವುದು.

ಇದರೊಂದಿಗೆ ಆಯ್ಕೆಯಾದ ಕೃಷಿ ನವೋದ್ಯಮಗಳ ಸಾಮರ್ಥ್ಯಾಭಿವೃದ್ಧಿಗಾಗಿ ವಿವಿಧ ತರಬೇತಿ ಕೇಂದ್ರಗಳಲ್ಲಿ ಹಾಗೂ ಇನ್ಕ್ಯುಬೇಷನ್ ಸೆಂಟರ್‌ಗಳಲ್ಲಿ ತರಬೇತಿ ನೀಡಲಾಗುವುದು. ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!