ಉಡುಪಿ, ಜ.25: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ 24ನೇ ವರ್ಷಾಚರಣೆ ಅಂಗವಾಗಿ ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇಶ ಕಂಡ ಶ್ರೇಷ್ಠ ಯುವ ನಾಯಕರಾದ ಸ್ವಾಮಿ ವಿವೇಕಾನಂದರ 161ನೇ ಜನ್ಮದಿನಾಚರಣೆ, ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಮದ ಪ್ರಮುಖ ಜನನಾಯಕರಾದ ಸುಭಾಸ್ ಚಂದ್ರ ಬೋಸ್ ಅವರ 127ನೇ ಜನ್ಮದಿನ ಹಾಗೂ ಕನ್ನಡ ಸಾಹಿತ್ಯ ಲೋಕದಲ್ಲಿ ಮಹಾಕವಿ ಎಂದು ಖ್ಯಾತಿ ಪಡೆದ ಕವಿ, ಸಾಹಿತಿಗಳಾದ ನಂದಳಿಕೆ ವರಕವಿ ಮುದ್ದಣ ಅವರ ಜನ್ಮದಿನಾಚರಣೆ ಅಂಗವಾಗಿ ‘ಚಿಣ್ಣರ ಕಲರವ -2024’ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಸಿ ಬಹುಮಾನ ವಿತರಿಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷರಾದ ದಿನೇಶ್ ಪೂಜಾರಿ, ಬೀರೊಟ್ಟು ಅವರು ಅಧ್ಯಕ್ಷತೆ ವಹಿಸಿದ್ದರು. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಚಾಲಕರಾದ ಯು. ಶೇಷಗಿರಿ ಕಾಮತ್ ಬಹುಮಾನ ವಿತರಿಸಿದರು. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ಪ್ರಥ್ವೀರಾಜ್ ಬಲ್ಲಾಳ್, ಕೆದಿಂಜೆ ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸೂರ್ಯಕಾಂತ್ ಶೆಟ್ಟಿ, ಕೆದಿಂಜೆ ಶಾಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಎನ್. ತುಕಾರಾಮ ಶೆಟ್ಟಿ, ಕೆದಿಂಜೆ ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
1 ರಿಂದ 3ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ವೇಷ ಸ್ಪರ್ಧೆ, 4ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ನಂದಳಿಕೆ ವರಕವಿ ಮುದ್ದಣ ಅವರ ಚಿತ್ರ ಬಿಡಿಸುವ ಸ್ಪರ್ಧೆ, 6ರಿಂದ 7 ನೇ ತರಗತಿಯ ವಿದ್ಯಾರ್ಥಿಗಳಿಗೆ ಸುಭಾಸ್‌ಚಂದ್ರ ಬೋಸ್ ಅವರ ಕುರಿತು ಭಾಷಣ ಸ್ಪರ್ಧೆ ನಡೆಸಿ ಬಹುಮಾನ ವಿತರಿಸಲಾಯಿತು. ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ವೀಣಾ ಪೂಜಾರಿ ಸ್ವಾಗತಿಸಿ, ಲಲಿತಾ ಆಚಾರ್ಯ ವಂದಿಸಿದರು. ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಸದಸ್ಯರಾದ ವೀಣಾ ಆಚಾರ್ಯ, ಅನ್ನಪೂರ್ಣ ಕಾಮತ್ ಪ್ರಾರ್ಥನೆಗೈದರು. ಸಂಘದ ಸದಸ್ಯರಾದ ಸುರೇಶ್ ಅಬ್ಬನಡ್ಕ,
ಕೀರ್ತನ್ ಪೂಜಾರಿ, ಕೆದಿಂಜೆ ಶಾಲಾ ಸಹಶಿಕ್ಷಕಿ ರೇಖಾ ಪೈ, ಗೌರವ ಶಿಕ್ಷಕಿಯರಾದ ಮಮತಾ ಜಗದೀಶ್, ಜಯಕ್ಷ್ಮೀ, ಚೇತನಾ, ಭಾರತಿ ಮೊದಲಾದವರಿದ್ದರು.