Friday, September 20, 2024
Friday, September 20, 2024

ಬಾರ್ಕೂರು: ರಾಷ್ಟ್ರೀಯ ಮತದಾರರ ದಿನಾಚರಣೆ

ಬಾರ್ಕೂರು: ರಾಷ್ಟ್ರೀಯ ಮತದಾರರ ದಿನಾಚರಣೆ

Date:

ಬ್ರಹ್ಮಾವರ, ಜ.25: ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಶನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಗುರುವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಪ್ರಾಂಶುಪಾಲರಾದ ಡಾ. ರಮೇಶ್ ಆಚಾರ್ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಯಾವುದೇ ಆಮಿಷಗಳಿಗೆ ಒಳಗಾಗದೇ ಯುವಜನರು ನಿರ್ಭೀತಿಯಿಂದ ರಾಷ್ಟ್ರದ ಒಳಿತಿಗಾಗಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು. ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ, ನಗರ ಪ್ರದೇಶಗಳಲ್ಲಿ ಶೇಕಡವಾರು ಮತದಾನದ ಪ್ರಮಾಣ ಕುಸಿಯುತ್ತಿರುವುದು ಬೇಸರದ ಸಂಗತಿ ಎಂದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಂದಿನಿ ಅವರು ಪ್ರಮಾಣ ವಚನ ಬೋಧಿಸಿದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀದೇವಿ ಕೆ., ಸಮಾಜಕಾರ್ಯ ವಿಭಾಗದ ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!