ಉಡುಪಿ, ಜ.25: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್/ಡಿಎಆರ್ ಪುರುಷ ಮತ್ತು ತೃತೀಯ ಲಿಂಗ ಪುರುಷ) -3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜನವರಿ 28 ರಂದು ಬೆಳಗ್ಗೆ 11 ರಿಂದ 12.30 ರ ವರೆಗೆ ರಾಜ್ಯದಾದ್ಯಂತ ನಡೆಯಲಿದ್ದು, ಪರೀಕ್ಷಗೆ ಹಾಜರಾಗುವ ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್ಗಳನ್ನು ಕಡ್ಡಾಯವಾಗಿ ಧರಿಸಬೇಕು. ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್ಗಳನ್ನು ಧರಿಸಬಹುದಾಗಿದ್ದು, ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಶರ್ಟ್ಗಳನ್ನು ಹಾಗೂ ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿಸುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ಶೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು ಧರಿಸಬೇಕು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಗೆ ವಸ್ತ್ರಸಂಹಿತೆ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆಗೆ ವಸ್ತ್ರಸಂಹಿತೆ
Date: