Home ಸುದ್ಧಿಗಳು ಪ್ರಾದೇಶಿಕ ಮಂಡ್ಯ ಹನುಮ ಧ್ವಜ ಪ್ರಕರಣ: ಪ್ರತಿಯೊಂದು ಹಿಂದೂ ಮನೆಗಳ ಮೇಲೆ ಹನುಮ ಧ್ವಜ ಹಾರಲಿ- ಯಶ್ಪಾಲ್...

ಮಂಡ್ಯ ಹನುಮ ಧ್ವಜ ಪ್ರಕರಣ: ಪ್ರತಿಯೊಂದು ಹಿಂದೂ ಮನೆಗಳ ಮೇಲೆ ಹನುಮ ಧ್ವಜ ಹಾರಲಿ- ಯಶ್ಪಾಲ್ ಸುವರ್ಣ

155
0

ಉಡುಪಿ, ಜ.29: ಸಿದ್ಧರಾಮಯ್ಯ ನೇತೃತ್ವದ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆ ಹಾಗೂ ಅಧಿಕಾರಿಗಳ ಮೂಲಕ ಮಂಡ್ಯದಲ್ಲಿ ಹನುಮ ಧ್ವಜವನ್ನು ತೆರವುಗೊಳಿಸುವ ಮೂಲಕ ಹಿಂದೂ ಸಮಾಜದ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿರುವಂತೆ ಭಜರಂಗದಳ ನಿಷೇಧದ ಪೂರ್ವಭಾವಿಯಾಗಿ ರಾಜ್ಯ ಸರಕಾರ ಹನುಮ ಧ್ವಜ ತೆರವುಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಮುಸ್ಲಿಂ ಪರ ಸರ್ಕಾರ ಎಂದು ಹೇಳಿಕೊಳ್ಳುವ ಈ ಸರ್ಕಾರ ಹನುಮ ಧ್ವಜ ತೆರವುಗೊಳಿಸುವ ಮೂಲಕ ಅವರ ಓಲೈಕೆಗೆ ಮುಂದಾದ ಹಾಗೆ ಕಾಣಿಸುತ್ತಿದೆ.

ಸರ್ಕಾರದ ಈ ಹಿಂದೂ ವಿರೋಧಿ ನಡೆಯನ್ನು ಪ್ರತಿಭಟಿಸಿದ ಹಿಂದೂ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಿಸಿ, ಕೇಸುಗಳನ್ನು ದಾಖಲಿಸಿ ಮಾನಸಿಕ ಸ್ಥೈರ್ಯ ಕುಗ್ಗಿಸುವ ದುಸ್ಸಾಹಸಕ್ಕೆ ಕೈಹಾಕಿದೆ. ಸಿದ್ದರಾಮಯ್ಯ ಸರ್ಕಾರ ಹಿಂದೂ ಸಮಾಜವನ್ನು ದ್ವಿತೀಯ ದರ್ಜೆ ನಾಗರಿಕರಂತೆ ನೋಡುತ್ತಿದೆ. ಹನುಮ ಧ್ವಜ ತೆರವುಗೊಳಿಸುವ, ಮಂಡ್ಯದ ಕೆರೆಗೊಡಿನ ಘಟನೆ ಹಿಂದೂ ಸಮಾಜಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದ್ದು, ಸಮಸ್ತ ಹಿಂದೂ ಸಮಾಜ ಮುಂದಿನ ದಿನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದಿಟ್ಟ ಉತ್ತರ ನೀಡುವ ಸಂಕಲ್ಪ ಮಾಡಲಿದೆ. ತಕ್ಷಣ ಸರ್ಕಾರ ಹನುಮ ಧ್ವಜವನ್ನ ಹಾರಿಸಲು ಅನುಮತಿ ನೀಡದಿದ್ದಲ್ಲಿ ‘ಮಂಡ್ಯ ಚಲೋ’ ಕರೆ ನೀಡಲಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಹಿಂದೂಗಳು ಹನುಮ ಧ್ವಜ ಹಿಡಿದು ಮಂಡ್ಯ ಜಿಲ್ಲೆಗೆ ಕಾಲಿಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ರಾಜ್ಯದ ಪ್ರತಿಯೊಬ್ಬ ಹಿಂದುವೂ ತಮ್ಮ ತಮ್ಮ ಮನೆಗಳ ಮೇಲೆ ಹನುಮ ಧ್ವಜ ಹಾರಿಸಿ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಬೇಕು ಎಂದು ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.