Tuesday, February 25, 2025
Tuesday, February 25, 2025

ಸಾಧಿಸುವ ಛಲ ಹೆಚ್ಚಾಗಿದೆ: ಗಾರ್ಗಿದೇವಿ

ಸಾಧಿಸುವ ಛಲ ಹೆಚ್ಚಾಗಿದೆ: ಗಾರ್ಗಿದೇವಿ

Date:

ಕುಂದಾಪುರ, ಫೆ.3: ನನ್ನ ಜೀವನದಲ್ಲಿ ಇದೊಂದು ಅವಿಸ್ಮರಣೀಯ ಕ್ಷಣ. ಜೀವನದಲ್ಲಿ ಏನಾದರನ್ನು ಸಾಧಿಸುವ ಛಲ ಹೊಂದಿದ್ದೇನೆ. ಆದರೆ ಸಾಧನೆಯ ಪಥದ ಬಾಗಿಲು ನನ್ನ ಜೀವನದಲ್ಲಿ ಬೇಗವೇ ತೆರೆದಿದೆ. ಈ ಮೆರವಣಿಗೆ, ಸನ್ಮಾನ ಎನ್ನುವುದು ನನಗೆ ಸಾಧಿಸುವ ಜವಾಬ್ದಾರಿ ಇನ್ನೂ ಹೆಚ್ಚಾಗಿಸಿದೆ ಎಂದು ರಾಷ್ಟ್ರಮಟ್ಟದ ಕಲೋತ್ಸವದ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದ ೯ನೇ ತರಗತಿ ವಿದ್ಯಾರ್ಥಿನಿ ಗಾರ್ಗಿದೇವಿ ಹೇಳಿದರು. ಅವರು ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್. ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ. ಕೆ. ಆರ್. ಆಚಾರ್ಯ ಸ್ಮಾರಕ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರ ತಾಯಿ ನಾಟ್ಯ ವಿದುಷಿ ಪ್ರವಿತ ಅಶೋಕ್, ಪಾಠ ಪ್ರವಚನದ ಜೊತೆಗೆ ಪಠ್ಯೇತರ ಚಟುವಟಿಕೆಗಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಬದುಕಿನೊಂದಿಗೆ ಗೌರವಯುತ ಜೀವನ ನಡೆಸಬೇಕು ಎಂದರು. ಸಂಸ್ಥೆಯ ಅಧ್ಯಕ್ಷರೂ ಹಾಗೂ ಸಂಚಾಲಕರಾದ ಬಿ. ಎಮ್. ಸುಕುಮಾರ ಶೆಟ್ಟಿಯವರು ಸಾಧಕ ವಿದ್ಯಾರ್ಥಿನಿಯನ್ನು ಸನ್ಮಾನಿಸಿ, ಈ ಬಾರಿಯ ಕಂಚಿನ ಪದಕದ ಸಾಧನೆ ಮುಂದೆ ಚಿನ್ನವನ್ನೇ ಗೆಲ್ಲುವಂತಾಗಲಿ ಎಂದು ಹಾರೈಸಿದರು.

ಕುಂದಾಪುರದ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಶೆಟ್ಟಿ ಮಾತನಾಡುತ್ತಾ, ಗಾರ್ಗಿದೇವಿಯ ಸಾಧನೆ ಕೇವಲ ಎಚ್. ಎಮ್. ಎಮ್. ಮತ್ತು ವಿ. ಕೆ. ಆರ್. ಶಾಲೆಗಳಿಗೆ ಮಾತ್ರವಲ್ಲ, ಕುಂದಾಪುರ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಲಿ ಎಂದರು. ಸಂಸ್ಥೆಯ ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್, ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಕುಮಾರ್ ಶೆಟ್ಟಿ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಿಕ್ಷಕಿಯರಾದ ಸ್ವಪ್ನ ಸತೀಶ್ ಮತ್ತು ದಿವ್ಯಾ ಎಚ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!