ಉಡುಪಿ, ಫೆ.5: 2024ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ರಾಜ್ಯ ಮಟ್ಟದ ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ತ್ರಿವೇಣಿ ನಿಂಜೂರು, ದ್ವಿತೀಯ ಎಂ.ಕಾಂ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಮತ್ತು ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಅಕ್ಷತಾ, ತೃತೀಯ ಬಿ.ಎ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ , ಶಂಕರನಾರಾಯಣ ಇವರು ಪಡೆದಿರುತ್ತಾರೆ.



ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ರಾಜ್ಯಪಾಲರಿಂದ ಬಹುಮಾನವನ್ನು ಸ್ವೀಕರಿಸಿದ್ದಾರೆ.