Friday, October 18, 2024
Friday, October 18, 2024

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಕವನ ಸಂಕಲನ ಆಹ್ವಾನ

ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿಗೆ ಕವನ ಸಂಕಲನ ಆಹ್ವಾನ

Date:

ಉಡುಪಿ, ಫೆ. 8: ವಿಶ್ವ ಭಾರತಿ ಕರ್ನಾಟಕ ಪ್ರತಿಷ್ಠಾನ ಬೆನಗಲ್ ಪ್ರಾಯೋಜಿತ ಕವಿ ಕುರಾಡಿ ಸೀತಾರಾಮ ಅಡಿಗರ ನೆನಪಿನ ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ’ ಗಾಗಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಸಂಸ್ಥೆಯು 2023ರಲ್ಲಿ ಮೊದಲ ಆವೃತ್ತಿಯಲ್ಲಿ ಪ್ರಕಟಣೆಗೊಂಡ ಕವನ ಸಂಕಲನವನ್ನು ಆಹ್ವಾನಿಸಿದೆ. ಆಸಕ್ತರು ತಮ್ಮ ಸ್ವರಚಿತ ಸ್ವತಂತ್ರ ಕವನ ಸಂಕಲನದ ಮೂರು ಪ್ರತಿಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬಹುದು. ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ, ಅಂಶುಮನೆ, ಬುಡ್ನಾರ್ ರಸ್ತೆ ಕುಂಜಿಬೆಟ್ಟು ಉಡುಪಿ.

ಕವನ ಸಂಕಲನಗಳ ಪ್ರತಿಗಳನ್ನು ಕಳುಹಿಸಲು ಕೊನೆಯ ದಿನಾಂಕ ಮಾರ್ಚ್ 20, 2024. ಪ್ರಶಸ್ತಿಯು ರೂಪಾಯಿ 10,000 ಗೌರವ ನಗದಿನೊಂದಿಗೆ ಪ್ರಶಸ್ತಿಪತ್ರ ಹಾಗೂ ಫಲಕವನ್ನು ಒಳಗೊಂಡಿರುತ್ತದೆ ಎಂದು ಪ್ರಶಸ್ತಿ ಸಮಿತಿಯ ಸಂಚಾಲಕಿ ಪೂರ್ಣಿಮಾ ಜನಾರ್ದನ್ ತಿಳಿಸಿರುತ್ತಾರೆ. ಕೃತಿಗಳು ಸ್ವರಚಿತ, ಸ್ವತಂತ್ರ ಕವನ ಸಂಕಲನಗಳಾಗಿರಬೇಕು. ಅನುವಾದ, ರೂಪಾಂತರ, ಶಿಶುಪ್ರಾಸ, ಹನಿಗವನ ಇತ್ಯಾದಿ ಕೃತಿಗಳನ್ನು ಸ್ಪರ್ಧಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. 9845240309 ಅವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಸ್ರೇಲ್ ದಾಳಿಗೆ ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವು

ಯು.ಬಿ.ಎನ್.ಡಿ., ಅ.18: ಹಮಾಸ್ ಮುಖ್ಯಸ್ಥ ಮತ್ತು ಕಳೆದ ವರ್ಷ ಅಕ್ಟೋಬರ್ 7...

ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ ಸಂಪನ್ನ; ೧೩೦ ಯೂನಿಟ್ ರಕ್ತ ಸಂಗ್ರಹ

ಕುಂದಾಪುರ, ಅ.18: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜನ್ಮದಿನದ ಪ್ರಯುಕ್ತ ಅಭಯಹಸ್ತ...

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆಯಾಗಿ ಸೌಮ್ಯ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು, ಅ.೧೮: ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ...

ಮುಂದಿನ ವರ್ಷ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳ ಅಳವಡಿಕೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಅ.17: ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ತಂತ್ರಜ್ಞಾನದ ಎಲ್‌ಹೆಚ್‌ಬಿ ಭೋಗಿಗಳು ಉತ್ಪಾದನೆಗೊಳ್ಳುತ್ತಿವೆ....
error: Content is protected !!