Sunday, January 19, 2025
Sunday, January 19, 2025

ಉಡುಪಿ: ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳ ರಕ್ಷಣೆ

ಉಡುಪಿ: ಬಾಲಕಾರ್ಮಿಕರಾಗಿ ದುಡಿಯುತ್ತಿದ್ದ ಮಕ್ಕಳ ರಕ್ಷಣೆ

Date:

ಉಡುಪಿ, ಫೆ.8: ನಗರದ ಚಿತ್ತರಂಜನ್ ಸರ್ಕಲ್ ಬಳಿ ಚಿನ್ನದ ಅಂಗಡಿಯೊಂದರಲ್ಲಿ ಬಾಲಕಾರ್ಮಿಕರು ದುಡಿಯುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ, ಮಹಿಳಾ ಪೊಲೀಸ್ ಇಲಾಖೆ ಹಾಗೂ ಜಿಲ್ಲಾ ನಾಗರಿಕ ಸಮಿತಿ ಇವರುಗಳು ಮಂಗಳವಾರ ಜಂಟಿ ಕಾರ್ಯಾಚರಣೆ ನಡೆಸಿ, ಚಿನ್ನದ ಅಂಗಡಿಯಲ್ಲಿ ಅಪಾಯಕಾರಿ ಉದ್ದಿಮೆಯಾದ ಚಿನ್ನಕ್ಕೆ ಹೊಳಪು ನೀಡುವ ಕೆಲಸದಲ್ಲಿ ನಿರತರಾಗಿದ್ದ 2 ಬಾಲಕಾರ್ಮಿಕ ಮತ್ತು 1 ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಬಾಲಕರ ಬಾಲ ಮಂದಿರದಲ್ಲಿ ಪುನರ್ವಸತಿ ಕಲ್ಪಿಸಲಾಯಿತು. ರಕ್ಷಣಾ ಕಾರ್ಯಾಚರಣೆಯಲ್ಲಿ ಕಾರ್ಮಿಕ ಇಲಾಖೆಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಯೋಜನಾ ನಿರ್ದೇಶಕಿ ಅಮ್ರತಾ, ಕಾರ್ಮಿಕ ನಿರೀಕ್ಷಕ ಸಂಜಯ್, ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಮಹೇಶ ಹಾಗೂ ಯೋಗೀಶ್, ಮಕ್ಕಳ ಸಹಾಯವಾಣಿ ಸಿಬ್ಬಂದಿ ಜ್ಯೋತಿ ಹಾಗೂ ಪ್ರಕಾಶ್, ನಗರ ಠಾಣಾ ಪೊಲೀಸರು ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಸಾರ್ಜನಿಕರು ತಮ್ಮ ಸುತ್ತಮುತ್ತಲ ಪ್ರದೇಶದಲ್ಲಿ ಕೆಲಸಕ್ಕೆ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ- 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ-112 ಸಂಖ್ಯೆಗೆ ಕರೆ ಮಾಡಿ ಮಕ್ಕಳ ರಕ್ಷಣೆಗೆ ಸಹಕಾರ ನೀಡಬೇಕು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಹಾಗೆಯೇ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಹಾಗೂ ವಾರೆಂಟ್ ರಹಿತ ಬಂಧಿಸಬಹುದಾದ ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸುವವರ ವಿರುದ್ಧ ಕನಿಷ್ಠ 6 ತಿಂಗಳಿಂದ ಗರಿಷ್ಠ 2 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ 20 ಸಾವಿರದಿಂದ 50 ಸಾವಿರದವರೆಗೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!