Tuesday, September 17, 2024
Tuesday, September 17, 2024

ಲೋಕಾಯುಕ್ತ ಜನಸಂಪರ್ಕ ಸಭೆ

ಲೋಕಾಯುಕ್ತ ಜನಸಂಪರ್ಕ ಸಭೆ

Date:

ಉಡುಪಿ, ಫೆ.8: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಫೆಬ್ರವರಿ 14 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಕಾಪು ಪುರಸಭೆ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ಮೊ.ನಂ: 9364062696 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!