Wednesday, July 29, 2026
Wednesday, July 29, 2026

ಫೆ.10: ಶನೈಶ್ಚರ ಪೂಜೆ, ಸಂತ ಸಮಾಗಮ

ಫೆ.10: ಶನೈಶ್ಚರ ಪೂಜೆ, ಸಂತ ಸಮಾಗಮ

Date:

ಬೆಳ್ಳಣ್, ಫೆ.9: ಮುಂಡ್ಕೂರು ಗ್ರಾಮದ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯಿ ಅಮ್ಮನವರ ಅಶ್ವತ್ಥಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ ಹಾಗೂ ಹಿಂದು ಸಂಘಟನೆಗಳ ಆಶ್ರಯದಲ್ಲಿ ಫೆ.10 ಶನಿವಾರದಂದು ಸಂಜೆ 4ಕ್ಕೆ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವ ಜರುಗಲಿದೆ. ರಾತ್ರಿ 7 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ, 7.30ರಿಂದ ಸಾರ್ವಜನಿಕ ಅನ್ನಸಂತರ್ಪಣೆ, 8 ಗಂಟೆಗೆ ಸಂತ ಸಮಾಗಮ ಧಾರ್ಮಿಕ ಸಭೆ ಜರುಗಲಿದೆ.

ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ, ಮೂಡುಬಿದಿರೆ ಜೈನ ಮಠದ ಸ್ವಸ್ತಿ ಶ್ರೀ ಭಾರತಭೂಷಣ ಚಾರುಕೀರ್ತಿ ಭಟ್ಟಾರಕ ಪಂಡಿತಾಚರ್ಯವರ್ಯ ಮಹಾ ಸ್ವಾಮೀಜಿ, ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಬಲ್ಯೊಟ್ಟು ಮಠದ ಶ್ರೀ ವಿಖ್ಯಾತನಂದ ಸ್ವಾಮೀಜಿ, ಗುರುಪುರ ಜಂಗಮ ಮಠದ ಶ್ರೀ ರುದ್ರಮುನಿ ಮಹಾ ಸ್ವಾಮೀಜಿ, ಕರಿಂಜೆ ಓಂ ಶ್ರೀ ಗುರುಮಠದ ಮುಕ್ತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀ ಈಶ ವಿಠಲದಾಸ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ವಿಶ್ವ ಹಿಂದು ಪರಿಷತ್‌ನ ಪ್ರಾಂತ್ಯ ಕಾರ್ಯದರ್ಶಿ ಶರಣ್ ಪಂಪ್ವೆಲ್ ಧಾರ್ಮಿಕ ಭಾಷಣ ಮಾಡಲಿದ್ದು, ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಅಧ್ಯಕ್ಷತೆ ವಹಿಸಲಿದ್ದಾರೆ. ರಾತ್ರಿ 10 ಗಂಟೆಯಿಂದ ಅಮ್ಮ ಕಲಾವಿದೆರ್ ಕುಡ್ಲ ತಂಡದಿಂದ ತುಳುನಾಡ ಕಲಾಬಿರ್ಸೆ ದೀಪಕ್ ರೈ ಪಾಣಾಜೆ ಮತ್ತು ರಂಗ್‌‌ದ ರಾಜೆ ಸುಂದರ್ ರೈ ಅಭಿನಯದ ಅಮ್ಮೆರ್ ತುಳು ಹಾಸ್ಯಮಯ ನಾಟಕ ಜರುಗಲಿದೆ ಎಂದು ಕಾರ್ಯಕ್ರಮದ ಸಂಚಾಲಕ ಹರೀಶ್ ಸಚ್ಚೇರಿಪೇಟೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ಸೇವಾ ಪ್ರಶಸ್ತಿ

ಕಟಪಾಡಿ, ಜು.28: ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ...

ಹೆಜಮಾಡಿ ಟೋಲ್ ಸಮಸ್ಯೆ: ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಶಾಸಕರ ಸಭೆ

ಹೆಜಮಾಡಿ, ಜು.28: ಹೆಜಮಾಡಿ ಟೋಲ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕರಾದ ಗುರ್ಮೆ ಸುರೇಶ್...

ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ: ಸಮಿತಿ ಸದಸ್ಯರಿಂದ ಧರ್ಮಸ್ಥಳ ಭೇಟಿ

ಬ್ರಹ್ಮಾವರ, ಜು.28: ಶ್ರೀ ಕಾಮೇಶ್ವರ ದೇವಸ್ಥಾನ ಬೈಕಾಡಿ ಇದರ ಅಭಿವೃದ್ಧಿ ಮತ್ತು...
error: Content is protected !!