Monday, November 25, 2024
Monday, November 25, 2024

ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಶಿವಶರಣೆಯರ ವಚನ ಸಾಹಿತ್ಯಗಳಿಂದ ಸಮಾಜ ಸುಧಾರಣೆ: ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

Date:

ಉಡುಪಿ, ಫೆ.12: 12 ನೇ ಶತಮಾನದಲ್ಲಿ ಶಿವಶರಣೆಯರು ರಚಿಸಿದ ವಚನ ಸಾಹಿತ್ಯಗಳು ವಿಚಾರ ಕ್ರಾಂತಿಯನ್ನು ಮೂಡಿಸುವುದರೊಂದಿಗೆ ಸಮಾಜ ಸುಧಾರಣೆಗೆ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ನಡೆದ ಕಾಯಕ ಶರಣರ ಜಯಂತಿ ಕಾರ್ಯಕ್ರಮದಲ್ಲಿ ಮಾದರ ಚೆನ್ನಯ್ಯ, ಡೋಹರ ಕಕ್ಕಯ್ಯ, ಮಾದರ ಧೂಳಯ್ಯ, ಉರಿಲಿಂಗ ಪೆದ್ದಿ ಹಾಗೂ ಸಮಗಾರ ಹರಳಯ್ಯ ಅವರುಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. 12 ನೇ ಶತಮಾನ ಮಹತ್ವಪೂರ್ಣವಾದ ಕಾಲಘಟ್ಟ. ಈ ಕಾಲಘಟ್ಟದಲ್ಲಿ ಕಾಯಕ ನಿಷ್ಠೆಯಿಂದ ಗುರುತಿಸಿಕೊಂಡ ಪ್ರತಿಯೊಬ್ಬ ಶರಣರು ವಿಶಿಷ್ಟವಾದ ಜೀವನ ನಡೆಸಿದ್ದಾರೆ. ಪ್ರಮಾಣಿಕ ಕೆಲಸಕ್ಕೆ ಗೌರವ ದೊರಕುತ್ತದೆ ಎಂಬುದನ್ನು ಇವರುಗಳಿಂದ ತಿಳಿಯಬಹುದಾಗಿದೆ. ವೈಚಾರಿಕ ಜ್ಞಾನವನ್ನು ಹೊಂದಿದ್ದ ಇವರುಗಳು ಮಾತು ಮತ್ತು ಕೃತಿಗೆ ವ್ಯತ್ಯಾಸ ಇಲ್ಲದಂತೆ ಸರಳ ಜೀವನ ನಡೆಸಿರುವುದು ಪ್ರತಿಯೊಬ್ಬರಿಗೂ ಆದರ್ಶಪ್ರಾಯವಾಗಿದೆ ಎಂದರು. ಶಿವಶರಣೆಯರು ಜಾತಿ, ಮತ, ಪಂಥದ ಬೇಧವಿಲ್ಲದೇ ಸಮ ಸಮಾಜದ ಕನಸನ್ನು ಕಂಡು ಅದರಂತೆ ಬದುಕಿ ತೋರಿಸಿದ್ದಾರೆ. ಅವರುಗಳ ಆದರ್ಶಗಳು ಇಂದಿಗೂ ದಾರಿದೀಪವಾಗಿದ್ದು, ಅವುಗಳನ್ನು ಪಾಲಿಸುವುದರೊಂದಿಗೆ ವಚನಕಾರರ ತತ್ವಗಳು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪನ್ಯಾಸ ನೀಡಿ, ಬಸವಣ್ಣನವರ ಪ್ರಭಾವದಿಂದ 12 ನೇ ಶತಮಾನದಲ್ಲಿ ಸಾಮಾಜಿಕ ಹಾಗೂ ಧಾರ್ಮಿಕ ಕ್ರಾಂತಿಯಾಯಿತು. ಪ್ರತಿಯೊಬ್ಬರೂ ಜೀವನ ನಿರ್ವಹಣೆಗೆ ಶ್ರಮ ವಹಿಸಿ ದುಡಿಯುವುದರೊಂದಿಗೆ ವೃತ್ತಿಧರ್ಮಕ್ಕೆ ಮೋಸ ಮಾಡಬಾರದೆನ್ನುವುದು ವಚನಕಾರರ ಮುಖ್ಯ ಆಶಯ. ಅತ್ಯಂತ ಹಿಂದುಳಿದ ವರ್ಗದಲ್ಲಿ ಹುಟ್ಟಿದ ಕಾಯಕ ಶರಣರು ತಮ್ಮ ಕಾಯಕ ನಿಷ್ಠೆಯಿಂದಲೇ ಸಮಾಜದಲ್ಲಿ ಗುರುತಿಸಿಕೊಂಡು, ಸಾಮರಸ್ಯದ ಜೀವನ ಸಾಗಿಸಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಕಲಾವಿದ ವಾಸುದೇವ ಬನ್ನಂಜೆ, ಕ.ಸಾ.ಪ ಕಾರ್ಯದರ್ಶಿ ನರಸಿಂಹಮೂರ್ತಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು, ಕನ್ನಡ ಉಪನ್ಯಾಸಕ ರಾಮಾಂಜಿ ನಿರೂಪಿಸಿ, ಕೋಶಾಧಿಕಾರಿ ಮನೋಹರ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!