Sunday, October 27, 2024
Sunday, October 27, 2024

ಮೀನುಗಾರಿಕೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆ ಭವಿಷ್ಯದ ಅನಿವಾರ್ಯ: ಯಶ್ಪಾಲ್ ಸುವರ್ಣ

ಮೀನುಗಾರಿಕೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆ ಭವಿಷ್ಯದ ಅನಿವಾರ್ಯ: ಯಶ್ಪಾಲ್ ಸುವರ್ಣ

Date:

ಉಡುಪಿ, ಫೆ.15: ಪರಿಸರ ಮಾಲಿನ್ಯ ನಿಯಂತ್ರಣ ಹಿನ್ನೆಲೆಯಲ್ಲಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಬಳಕೆ ನಿಷೇಧಕ್ಕೆ ಕೇಂದ್ರ ಸರ್ಕಾರ ಮುಂದಾದಲ್ಲಿ ಭವಿಷ್ಯದ ಮೀನುಗಾರಿಕೆಗೆ ದೋಣಿಗಳಿಗೆ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಉಡುಪಿಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ರವರ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಭವಿಷ್ಯದ ಮೀನುಗಾರಿಕೆಗೆ ಎಲೆಕ್ಟ್ರಿಕ್ ಇಂಜಿನ್ ಬಳಕೆಯ ಅನಿವಾರ್ಯತೆ ಹಾಗೂ ಸವಾಲುಗಳ ಬಗ್ಗೆ ಕರಾವಳಿ ಜಿಲ್ಲೆಯ ಮೀನುಗಾರರಿಗೆ ಆಯೋಜಿಸಿದ್ದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಮೀನುಗಾರಿಕಾ ದೋಣಿ ಹಾಗೂ ಬೋಟ್ ಗಳು ಇಂಧನವಾಗಿ ಸೀಮೆ ಎಣ್ಣೆ ಹಾಗೂ ಡೀಸೆಲ್ ಉತ್ಪನ್ನಗಳನ್ನು ಅವಲಂಬಿಸಿದ್ದು, ಸರಕಾರ ಹಂತ ಹಂತವಾಗಿ ಈ ಇಂಧನಗಳನ್ನು ನಿಷೇಧಿಸಿ ಪರ್ಯಾಯವಾಗಿ ಎಲೆಕ್ಟ್ರಿಕ್ ಇಂಜಿನ್ ಅಳವಡಿಕೆಗೆ ಲಭ್ಯವಿರುವ ತಂತ್ರಜ್ಞಾನ ಅಭಿವೃದ್ಧಿ ಹಾಗೂ ಸರ್ಕಾರದ ಮೂಲಕ ಆರ್ಥಿಕ ಸಹಕಾರ ನೀಡಿ ಮೀನುಗಾರಿಕೆಗೆ ಪ್ರೋತ್ಸಾಹ ನೀಡಬೇಕು ಎಂದರು. ಸಭೆಯಲ್ಲಿ ಖಾಸಗಿ ಕಂಪನಿಯ ಪ್ರತಿನಿಧಿಗಳು ಮೀನುಗಾರಿಕೆಗೆ ಲಭ್ಯವಿರುವ ಎಲೆಕ್ಟ್ರಿಕ್ ಇಂಜಿನ್ ತಂತ್ರಜ್ಞಾನ, ಅನುಕೂಲತೆ ಹಾಗೂ ಲಭ್ಯತೆಗಳ ಬಗ್ಗೆ ಮೀನುಗಾರ ಮುಖಂಡರಿಗೆ ಮಾಹಿತಿ ನೀಡಿ, ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಿದರು.

ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷರಾದ ದಯಾನಂದ ಸುವರ್ಣ, ಮೀನುಗಾರಿಕೆ ಇಲಾಖೆ ನಿರ್ದೇಶಕರಾದ ದಿನೇಶ್ ಕಲ್ಲೇರ್ ಹಾಗೂ ಕರಾವಳಿ ಜಿಲ್ಲೆಯ ವಿವಿಧ ಮೀನುಗಾರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇಂದಿನ (ಅ.26) ಚಿನ್ನದ ದರ

GOLD 22KT- 7,360 8 GRAMS- 58,880

ಕೆ.ಎಂ.ಸಿ. ಮಣಿಪಾಲ: ಜಾಗೃತಿ ನಡಿಗೆ

ಮಣಿಪಾಲ, ಅ.26: ಪ್ರತಿವರ್ಷ ಅಕ್ಟೋಬರ್‌ನ ಎರಡನೇ ಶನಿವಾರದಂದು, ಉಪಶಾಮಕ ಆರೈಕೆ ಅಗತ್ಯಗಳೊಂದಿಗೆ...

ಹಂಗಾರಕಟ್ಟೆ ಕಲಾಕೇಂದ್ರ ವಿದ್ಯಾರ್ಥಿಗಳ ಸಮಾವೇಶ

ಕೋಟ, ಅ.26: ಐವತ್ತು ವರ್ಷದ ಇತಿಹಾಸವಿರುವ ಗುಂಡ್ಮಿಯ ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ,...

ಸ್ನಾತಕೋತ್ತರ ಪದವಿಯ ಸಂಶೋಧನಾ ಮಾರ್ಗದರ್ಶಿಗಳ ಕ್ಷಮತೆ ವೃದ್ಧಿ ರಾಷ್ಟ್ರೀಯ ಕಾರ‍್ಯಗಾರ

ಮೂಡುಬಿದಿರೆ, ಅ.26: ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಹಾಗೂ ಭಾರತೀಯ ಔಷಧ...
error: Content is protected !!