Sunday, November 24, 2024
Sunday, November 24, 2024

ಸಂತ ಸೇವಾಲಾಲರಿಂದ ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕು: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

ಸಂತ ಸೇವಾಲಾಲರಿಂದ ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕು: ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್

Date:

ಉಡುಪಿ, ಫೆ.15: ಬಂಜಾರ ಸಮುದಾಯಕ್ಕೆ ಜ್ಞಾನದ ಬೆಳಕನ್ನು ನೀಡಿದವರು ಸಂತ ಸೇವಾಲಾಲರು. ಅಂದಿನ ಕಾಲಘಟ್ಟದಲ್ಲಿ ನೀಡಿದ ಸಂದೇಶಗಳು ಹಾಗೂ ಸಮಾಜ ಸುಧಾರಣೆಗೆ ಮಾಡಿದ ವಿಷಯಗಳಿಂದಾಗಿ ಅವರನ್ನು ಮಹಾನ್ ವ್ಯಕ್ತಿಗಳಾಗಿ ಇಂದಿಗೂ ಪೂಜಿಸುತ್ತಿದ್ದೇವೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೃಷ್ಣನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಸಂತ ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು. ಸಮಾಜದ ದೃಷ್ಠಿಕೋನ ಪ್ರತಿನಿತ್ಯ ಬದಲಾಗುತ್ತಿರುತ್ತದೆ. ಪ್ರತಿಯೊಬ್ಬರಿಗೂ ಸಮಾನ ಅವಕಾಶ ಸಿಗುವ ಮೂಲಕ ಸಾಮಾಜಿಕ ಸ್ಥಾನಮಾನ ದೊರಕುವಂತಾಗಬೇಕು. ತಳಮಟ್ಟದ ಸಮುದಾಯಗಳ ಅಭಿವೃದ್ಧಿಗಾಗಿ ನಿಗಮಗಳನ್ನು ಹಾಗೂ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದ್ದು, ಅವುಗಳ ಸಮರ್ಪಕ ಬಳಕೆಯಾಗಬೇಕು ಎಂದರು. ಸೇವಾಲಾಲರು ಪ್ರಪಂಚ ಪರ್ಯಟನೆ ಸಂದರ್ಭದಲ್ಲಿ ಸಂದೇಶ ನೀಡುವಾಗ ಹಲವು ಕಷ್ಟ ಕಾರ್ಪಣ್ಯಗಳನ್ನು ಮೆಟ್ಟಿನಿಂತು ಸಮಾಜಕ್ಕೆ ಸಂದೇಶ ನೀಡಿದ್ದಾರೆ. ಅವರ ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಆಂತರಿಕವಾಗಿ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ, ವ್ಯಕ್ತಿ ಶಕ್ತಿಯಾಗಬಹುದು ಎಂಬುದನ್ನು ಇವರು ತೋರಿಸಿಕೊಟ್ಟಿದ್ದಾರೆ ಎಂದರು.

ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಾಯಕ ಪ್ರಾಧ್ಯಾಪಕ ಕುಮಾರ್ ಎಮ್ ಉಪನ್ಯಾಸ ನೀಡಿ, ಬಂಜಾರ ಸಮುದಾಯ ಸ್ವಾಭಿಮಾನದಿಂದ ಬದುಕುವ ದಾರಿಯನ್ನು ತೋರಿಸಿ ಕೊಟ್ಟ ಮಹಾನ್ ಸಾಧಕ ಸಂತ ಸೇವಾಲಾಲರು. ವಿಶಿಷ್ಟ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮೂಲಕ ಸಮಕಾಲಿನ ಸಮಾಜವನ್ನು ಪರಿವರ್ತಿಸುವಲ್ಲಿ ಇವರ ಕೊಡುಗೆ ಅಪಾರ ಎಂದರು. ಸಕಲ ಜೀವಿಗಳಲ್ಲಿ ದಯೆ ಹೊಂದಿದ ದಯಾ ಪೂರ್ಣ ವ್ಯಕ್ತಿ ಸೇವಾಲಾಲರು. ಪ್ರತಿಯೊಂದು ಜೀವಿಗಳನ್ನು ರಕ್ಷಿಸಬೇಕು ಎಂಬ ಮನೋಭಾವವನ್ನು ಚಿಕ್ಕಂದಿನಿಂದಲೇ ಹೊಂದಿದ್ದರು. ತಮ್ಮ ಜನಾಂಗದವರು ಹಲವಾರು ದುಷ್ಚಟಗಳು ಹಾಗೂ ಮೂಢನಂಬಿಕೆಗೆ ಒಳಗಾಗಿರುವುದನ್ನು ಕಂಡ ಇವರು, ಅವುಗಳಿಂದ ಹೊರತರುವ ಕೆಲಸ ಮಾಡಿದ್ದಾರೆ ಎಂದರು. ಬಂಜಾರರು ಸಮಾಜದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಇವರ ಸಂದೇಶಗಳು ಪ್ರೇರಕವಾಗಿವೆ. ಲಿಂಗ ಸಮಾನತೆಯನ್ನು ಪ್ರತಿಪಾದಿಸಿದ ಬಹಳ ದೊಡ್ಡ ಸಂತ ಸೇವಾಲಾಲರು, ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಬೇಕು ಎನ್ನುವುದು ಇವರ ಆಶಯವಾಗಿತ್ತು. ಶ್ರಮದ ಮೂಲಕ ಮನುಷ್ಯ ಬದುಕಬೇಕು. ವ್ಯರ್ಥ ಜೀವನ ನಡೆಸಬಾರದು ಎಂಬ ಸಂದೇಶಗಳ ಮೂಲಕ ಸಮುದಾಯದವರು ಸ್ವಾಭಿಮಾನದಿಂದ ಬದುಕು ನಡೆಸುತ್ತಿದ್ದಾರೆ. ಸಂತ ಸೇವಾಲಾಲರ ಮಾರ್ಗದರ್ಶನವನ್ನು ಸಮುದಾಯದವರು ಇಂದಿಗೂ ಪಾಲಿಸುತ್ತಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣದಲ್ಲಿ ಕೈಜೋಡಿಸೋಣ ಎಂದರು.

ಕೃಷ್ಣನಗರಿ ಸಂತ ಶ್ರೀ ಸೇವಾಲಾಲ ಬಂಜಾರ ಸಂಘದ ಜಿಲ್ಲಾ ಅಧ್ಯಕ್ಷ ಕುಮಾರ್ ಕೆ.ಎಮ್, ಮಾತನಾಡಿ, ಬಂಜಾರ ಸಮುದಾಯದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಸಮಾಜದ ಜನರು ಇಂದು ಶೈಕ್ಷಣಿಕವಾಗಿ ಸಹ ಮುಂದುವರೆದಿದ್ದು, ಅನಕ್ಷರತೆ ಕಡಿಮೆಯಾಗಿದೆ. ದುಸ್ಥಿತಿಯಲ್ಲಿದ್ದ ಸಮುದಾಯ ಇಂದು ಸುಸ್ಥಿಗೆ ಬರಲು ಮೂಲ ಕಾರಣ ಸಂತ ಸೇವಾಲಾಲರು ಎಂದರು. ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಹಾಕಪ್ಪ ಆರ್ ಲಮಾಣಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ನರಸಿಂಹ ಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರೆ, ಮಹೇಶ್ ನಿರೂಪಿಸಿ, ಗಂಗಾನಾಯ್ಕ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!