ಉಡುಪಿ, ಫೆ.15: ಸಾಲಿಗ್ರಾಮ ಪಟ್ಟಣ ಪಂಚಾಯತ್ ವಾಪ್ತಿಯಲ್ಲಿ ಅಂತರ್ ಜಲ ಮಟ್ಟ ಕಡಿಮೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುವ ಸಂಭವವಿದ್ದು ಫೆಬ್ರವರಿ 15 ರಿಂದ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 2 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಮರ ಗಿಡಗಳಿಗೆ ನೀರನ್ನು ಬಿಡದೇ ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ ಪಟ್ಟಣ ಪಂಚಾಯತ್‌ನೊಂದಿಗೆ ಸಹಕರಿಸಬೇಕಾಗಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾಲಿಗ್ರಾಮ: ಎರಡು ದಿನಗಳಿಗೊಮ್ಮೆ ನೀರು ಸರಬರಾಜು

ಸಾಲಿಗ್ರಾಮ: ಎರಡು ದಿನಗಳಿಗೊಮ್ಮೆ ನೀರು ಸರಬರಾಜು
Date: