Sunday, January 19, 2025
Sunday, January 19, 2025

ಸಮುದಾಯದ ಸಹಭಾಗಿತ್ವದೊಂದಿಗೆ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಬೇಕು

ಸಮುದಾಯದ ಸಹಭಾಗಿತ್ವದೊಂದಿಗೆ ಗ್ರಾಮಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಬೇಕು

Date:

ಉಡುಪಿ, ಫೆ.16: ಗ್ರಾಮಗಳಲ್ಲಿ ಸಮುದಾಯದ ಸಹಭಾಗಿತ್ವದೊಂದಿಗೆ ಅಲ್ಲಿನ ಜನರ ಮನವೊಲಿಸಿ, ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟವನ್ನು ನಿಷೇಧಿಸುವುದರೊಂದಿಗೆ ತಂಬಾಕು ಮುಕ್ತ ಗ್ರಾಮವನ್ನಾಗಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಬೀಡಿ ಕಟ್ಟುವ ಕಾರ್ಮಿಕರುಗಳಿಗೆ ತಂಬಾಕು ಉತ್ಪನ್ನಗಳ ಬಳಕೆಯಿಂದ ಸಾರ್ವಜನಿಕರು ಆರೋಗ್ಯದ ಮೇಲೆ ಉಂಟಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಿ, ಅವರು ಇತರೆ ಉದ್ಯೋಗಗಳನ್ನು ಕೈಗೊಳ್ಳುವ ಕುರಿತು ಅರಿವು ಮೂಡಿಸಬೇಕು. ಈಗಾಗಲೇ 42 ಕಾರ್ಮಿಕರು ಬೀಡಿ ಕಟ್ಟುವ ಉದ್ಯೋಗವನ್ನು ಬಿಟ್ಟು ಇತರೆ ಉದ್ಯೋಗ ಮಾಡಲು ಸಂಜೀವಿನಿ ಕಾರ್ಯಕ್ರಮದಡಿ ಹೊಸದಾಗಿ ಸದಸ್ಯತ್ವ ಪಡೆದು ಕೊಂಡಿರುತ್ತಾರೆ ಎಂದ ಅವರು, ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಮೊದಲು ಸ್ಥಳೀಯ ಸಂಸ್ಥೆಗಳ ವತಿಯಿಂದ ಪ್ರತ್ಯೇಕ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ ಎಂದರು. ಬಹುಮಹಡಿಗಳ ವಸತಿ ಸಮುಚ್ಛಯಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮುಕ್ತ ವಲಯವೆಂದು ಘೋಷಿಸಲು ಅಲ್ಲಿನ ಜನರಿಗೆ ಮನವೊಲಿಸಿ ಎಂದ ಅವರು, ಕುಂದಾಪುರ ತಾಲೂಕಿನ ಸ್ವಸ್ತಿಕ್ ಎನ್ ಕ್ಲೇವ್ ಬಹುಮಹಡಿ ವಸತಿ ಸಮುಚ್ಛಯವನ್ನು ತಂಬಾಕು ಮುಕ್ತ ಪ್ರದೇಶವಾಗಿ ಶೀಘ್ರದಲ್ಲಿಯೇ ಘೋಷಿಸಲಾಗುವುದು ಎಂದರು.

ತಂಬಾಕು ಉತ್ಪನ್ನಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿ ಮಾರಕ ರೋಗಗಳಾದ ಕ್ಯಾನ್ಸರ್, ಹೃದಯ ಸಂಬಂಧಿತ ರೋಗ, ಉಸಿರಾಟದ ಕಾಯಿಲೆ ಸೇರಿದಂತೆ ಮತ್ತಿತರ ರೋಗಗಳು ಉಂಟಾಗುತ್ತವೆ. ಇಂತಹ ಉತ್ಪನ್ನಗಳಿಂದ ಪ್ರತಿಯೊಬ್ಬರೂ ದೂರ ಇರಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂದರು. ಜಿಲ್ಲೆಯ ಎಲ್ಲಾ ಶಾಲೆಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ವಲಯಗಳೆಂದು ಫಲಕಗಳನ್ನು ಅಳವಡಿಸಲಾಗಿದೆ. ಶಾಲೆಯ 100 ಮೀ.
ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ ಎಂದ ಅವರು, 18 ವರ್ಷದೊಳಗಿನವರಿಗೆ ಬೀಡಿ, ಸಿಗರೇಟ್ ಗಳನ್ನು ಮಾರಾಟ ಮಾಡುವ ಹಾಗಿಲ್ಲ. ಒಂದೊಮ್ಮೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅವರುಗಳ ಮೇಲೆ ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಫೆಬ್ರವರಿ 1 ರಿಂದ ಈವರೆಗೆ ಆರೋಗ್ಯ ಇಲಾಖೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ, ಎಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಕೋಟ್ಪಾ ನಿಯಂತ್ರಣ ತನಿಖಾ ದಳ ತಂಡ ರಚಿಸಿ, ಜಿಲ್ಲಾದ್ಯಂತ 82 ದಾಳಿಗಳನ್ನು ಹಮ್ಮಿಕೊಂಡು 919 ತಂಬಾಕು ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿ, 698 ಪ್ರಕರಣಗಳಲ್ಲಿ 99,204 ರೂ. ದಂಡವನ್ನು ವಿಧಿಸಲಾಗಿದೆ ಎಂದ ಅವರು, ಕೋಟ್ಪಾ ಕಾಯಿದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಸಹಾಯಕ ಕಮಿಷನರ್ ರಶ್ಮಿ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಢಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ, ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ವಿವಿಧ ಇಲಾಖೆಯ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...

ಮಾನವೀಯ ಮೌಲ್ಯಗಳೇ ವಿವೇಕಾನಂದರ ತತ್ವ: ಡಾ. ನಿಕೇತನ

ಉಡುಪಿ, ಜ.18: ಶಾಂತಿ ಮತ್ತು ಪ್ರೀತಿಯ ಮೂಲಕ ಮಾನವ ಜನಾಂಗ ಉತ್ತಮ...

ತಾಂತ್ರಿಕ ಸಹಾಯಕರ ಹುದ್ದೆ: ಅರ್ಜಿ ಅಹ್ವಾನ

ಉಡುಪಿ, ಜ.19: ಕೃಷಿ ಇಲಾಖೆಯ ವತಿಯಿಂದ ಅನುಷ್ಟಾನಗೊಳಿಸುತ್ತಿರುವ ಆಹಾರ ಮತ್ತು ಪೌಷ್ಟಿಕ...
error: Content is protected !!