Tuesday, February 25, 2025
Tuesday, February 25, 2025

ಚುನಾವಣಾ ಬಾಂಡ್ ಯೋಜನೆ ರದ್ದು ಸ್ವಾಗತಾರ್ಹ: ಉಡುಪಿ ಜಿಲ್ಲಾ ಕಾಂಗ್ರೆಸ್

ಚುನಾವಣಾ ಬಾಂಡ್ ಯೋಜನೆ ರದ್ದು ಸ್ವಾಗತಾರ್ಹ: ಉಡುಪಿ ಜಿಲ್ಲಾ ಕಾಂಗ್ರೆಸ್

Date:

ಉಡುಪಿ, ಫೆ.18: ಚುನಾವಣಾ ಬಾಂಡ್ ಯೋಜನೆಯನ್ನು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಪೀಠ ನೀಡಿರುವ ತೀರ್ಪು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಐತಿಹಾಸಿಕ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಹೇಳಿದೆ. ಬಾಂಡ್ ಯೋಜನೆ ಮೂಲಕ ಆಡಳಿತರೂಢ ಬಿಜೆಪಿ 6,566 ಕೋಟಿ ರೂಪಾಯಿಗಳನ್ನು ಗಳಿಸಿತ್ತು, ಆದರೆ ಅದೇ ಸಮಯದಲ್ಲಿ ಪ್ರಮುಖ ವಿಪಕ್ಷವಾದ ಕಾಂಗ್ರೆಸ್ 1,123 ಕೋಟಿ ಗಳಿಸಿತ್ತು ಎಂಬುದನ್ನು ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ಬಂಡವಾಳ ಶಾಹಿಗಳಿಂದ ಚುನಾವಣೆಗಾಗಿ ದೇಣಿಗೆ ಸಂಗ್ರಹಿಸುವ ದುರುದ್ದೇಶದಿಂದಲೇ ಕೇಂದ್ರ ಸರಕಾರ ಚುನಾವಣಾ ಬಾಂಡ್ ಜಾರಿಗೆ ತಂದಿದ್ದು ಇದರಿಂದ ದೇಣಿಗೆಯ ಹೆಚ್ಚಿನ ಭಾಗವು ಕೇಂದ್ರದಲ್ಲಿರುವ ಆಡಳಿತ ಪಕ್ಷಕ್ಕೆ ಹರಿದು ಬಂದಿದೆ. ಕೇಂದ್ರ ಬಿಜೆಪಿ ಸರಕಾರ 2019ರ ಲೋಕಸಭಾ ಚುನಾವಣೆಯ ಪೂರ್ವದಲ್ಲಿ ಜಾರಿಗೆ ತಂದಿದ್ದ ಈ ಚುನಾವಣಾ ಬಾಂಡುಗಳು ಲಂಚದ ಮತ್ತೊಂದು ರೂಪವಾಗಿತ್ತು. ಈ ಬಾಂಡ್ ಗಳಿಗಾಗಿ ಕೇಂದ್ರ 5 ಕಾಯ್ದೆಗಳನ್ನು ತಿದ್ದುಪಡಿ ಮಾಡಿತ್ತು. ಆದರೆ ಇದು ಅಸಾಂವಿಧಾನಿಕ ಮಾತ್ರವಲ್ಲ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಮಾಹಿತಿ ಹಕ್ಕಿನ ಉಲ್ಲಂಘನೆಯಾಗಿದೆ.

ಚುನಾವಣಾ ಬಾಂಡ್ ಯೋಜನೆಯಡಿ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಯಾವುದೇ ಮಿತಿ ಇಲ್ಲದೆ ದೇಣಿಗೆ ನೀಡಬಹುದಾಗಿದ್ದರಿಂದ ಬಂಡವಾಳ ಶಾಹಿ ಶಕ್ತಿಗಳು ಹಾಗೂ ಆಡಳಿತರೂಢ ಸರ್ಕಾರಗಳ ನಡುವೆ ಕೊಡುಕೊಳ್ಳುವಿಕೆ ಸಂಬಂಧ ಏರ್ಪಡುತ್ತದೆ. ಕೇಂದ್ರದ ಈ ವ್ಯವಸ್ಥೆಯಿಂದ ಭ್ರಷ್ಟಾಚಾರ ಕಡಿಮೆಯಾಗಿಲ್ಲ ಆದರೆ ಕಣ್ಣಿಗೆ ಕಾಣುವಂತಿಲ್ಲ. ಯಾರು ಯಾರಿಗೆ ಕೊಡುತ್ತಾರೆ ಎಂಬುದು ಮತದಾರರ ಅರಿವಿಗೆ ಬರಬೇಕು ಸುಪ್ರೀಂ ಕೋರ್ಟಿನ ಈ ತೀರ್ಪು ಕೇಂದ್ರ ಸರ್ಕಾರದ ಸಂಚಿಕೆ ಹಿಡಿದ ಕನ್ನಡಿಯಾಗಿದ್ದು ಕೇಂದ್ರದ ಗುಪ್ತ ಕಾರ್ಯಸೂಚಿಯನ್ನು ಸುಪ್ರೀಂ ಬಯಲಿಗೆಳೆದಿದೆ. ಬಿಜೆಪಿ ಕದ್ದು ಮುಚ್ಚಿ ಮಾಡುತ್ತಿರುವ ಭ್ರಷ್ಟ ವ್ಯವಸ್ಥೆಗೆ ಕೋರ್ಟ್ ಕಡಿವಾಣ ಹಾಕಿರುವುದು ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಭಾಸ್ಕರ್ ರಾವ್ ಕಿದಿಯೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಕ್ಕೆಹಳ್ಳಿ: ಕಲಿಕಾ ಹಬ್ಬ

ಬ್ರಹ್ಮಾವರ, ಫೆ.25: ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ,...

ಅಧ್ಯಾತ್ಮ ವಿದ್ಯೆಯ ಅಧ್ಯಯನದಿಂದ ನಮ್ಮ ವಿಕಾಸ: ಪುತ್ತಿಗೆ ಶ್ರೀಪಾದರು

ಉಡುಪಿ, ಫೆ.25: ಲೌಕಿಕ ಶಿಕ್ಷಣದಿಂದ ವೃತ್ತಿಯ ಸಂಪಾದನೆಯಾಗುತ್ತದೆ. ಅಧ್ಯಾತ್ಮ ಶಿಕ್ಷಣದಿಂದ ಜೀವನ...

ರೆಡ್ ಕ್ರಾಸ್ ಶಿಬಿರ

ಉಡುಪಿ, ಫೆ.24: ಮಹಾತ್ಮ ಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ರೆಡ್ ಕ್ರಾಸ್...

ತುಳು ನಟ ನವೀನ್ ಡಿ ಪಡೀಲ್ ಅವರಿಗೆ ವಿಶ್ವಪ್ರಭಾ ಪ್ರಶಸ್ತಿ ಪ್ರದಾನ

ಉಡುಪಿ, ಫೆ.24: ಮಾನಸಿಕವಾಗಿ ದುಗುಡ-ಒತ್ತಡಕ್ಕೆ ಒಳಗಾದಾಗ ನಿವಾರಣೆಗಾಗಿ ನಾನಾ ರೀತಿಯ ಕ್ರಮ...
error: Content is protected !!