Wednesday, January 22, 2025
Wednesday, January 22, 2025

ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಪದಪ್ರಧಾನ ಸಮಾರಂಭ

ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕದ ಪದಪ್ರಧಾನ ಸಮಾರಂಭ

Date:

ಉಡುಪಿ, ಫೆ.20: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ತು ಉಡುಪಿ ಜಿಲ್ಲಾ ಘಟಕ ಹಾಗೂ ಸೈಂಟ್ ಮೇರಿಸ್ ಕೈಗಾರಿಕಾ ತರಬೇತಿ ಸಂಸ್ಥೆ ಚಿಟ್ಪಾಡಿ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ಪದಪ್ರಧಾನ ಸಮಾರಂಭ ಮಂಗಳವಾರ ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಅವರು ಚೆಂಡೆವಾದನದ ಮೂಲಕ ಉದ್ಘಾಟಿಸಿ ಮಾತನಾಡಿ, ಜನಪದ ಕಲೆಯನ್ನು ದಾಖಲೀಕರಣ ಮಾಡಬೇಕಾದ ತುರ್ತು ಅವಶ್ಯಕತೆ ಇದೆ. ಮುಂದಿನ ಪೀಳಿಗೆಗೆ ಈ ಕಲೆಯನ್ನು ಉಳಿಸಿ ಬೆಳೆಸಬೇಕಾದ ಅಗತ್ಯತೆ ಇದೆ. ನಮ್ಮ ಕನ್ನಡ ಜನಪದ ಪರಿಷತ್ತಿನಿಂದ ಇದಕ್ಕೆ ಪೂರಕವಾದ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೋಕಮಾತ ಚರ್ಚಿನ ಸಹಾಯಕ ಧರ್ಮಗುರು ಮೇಲ್ವಿನ್ ರೋಯ್ ಲೋಬೋ ವಹಿಸಿದ್ದರು. ಮೂಡುಸಗ್ರಿ ಕ್ಷೇತ್ರದ ಧರ್ಮದರ್ಶಿ ಭಾಸ್ಕರ ಗುಂಡಿಬೈಲು ಶುಭ ಹಾರೈಸಿದರು. ವೇದಿಕೆಯಲ್ಲಿ ಸೈಂಟ್ ಮೇರಿಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ವಿಜಯ್ ಡಿಸೋಜ, ಉಡುಪಿ ಜಿಲ್ಲಾ ವರ್ತಕರ ಸಂಘದ ಅಧ್ಯಕ್ಷ ಐರೋಡಿ ಸಹನಶೀಲ ಪೈ ಮುಂತಾದವರಿದ್ದರು. ನಿವೃತ್ತ ಪ್ರಾಂಶುಪಾಲ ಡಾ. ಗಣನಾಥ ಎಕ್ಕಾರು, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಿರಿಯ ಕಲಾವಿದ ಗಂಗಾಧರ ಕಿದಿಯೂರು, ಸುರಭಿ ಮಹಿಳಾ ಚೆಂಡೆ ವಾದನ ಬಳಗದ ಸುನಂದ ಗೋಪಾಲ ಗಾಣಿಗ ಬೈಂದೂರು ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ವತಿಯಿಂದ ರಾಜ್ಯಾಧ್ಯಕ್ಷ ಡಾ.ಎಸ್ ಬಾಲಾಜಿ ಮತ್ತು ಜಿಲ್ಲಾ ಅಧ್ಯಕ್ಷ ಡಾ.ಗಣೇಶ್ ಕುಮಾರ್ ಗಂಗೊಳ್ಳಿ ಅವರನ್ನು ಗೌರವಿಸಲಾಯಿತು. ಡಾ.ಗಣೇಶ್ ಗಂಗೊಳ್ಳಿ ನೇತೃತ್ವದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು.

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಕಾರ್ಯಾಧ್ಯಕ್ಷ ಉದಯ ಕುಮಾರ್ ಹೈಕಾಡಿ ಸ್ವಾಗತಿಸಿದರು. ಚಂದ್ರ ಹಂಗಾರಕಟ್ಟೆ, ಫಾರೂಕ್ ಚಂದ್ರನಗರ ಪರಿಚಯಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕವಾ೯ಲು ನಿರೂಪಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಸುವರ್ಣ ಕಟಪಾಡಿ ವಂದಿಸಿದರು. ಸುರಭಿ ಮಹಿಳಾ ಚೆಂಡೆ ವಾದನ ಬಳಗದಿಂದ ಚೆಂಡೆ ವಾದನ ಪ್ರದಶ೯ನ ಮತ್ತು ಜಾನಪದ ಕಲಾವಿದರಾದ ಡಾ.ಗಣೇಶ್ ಗಂಗೊಳ್ಳಿ, ಅಶ್ವಿನಿ ಸುವರ್ಣ ಪಡುಬಿದ್ರೆ, ವಸಂತಿ ಕಡಂಬಳ ಕಾರ್ಕಳ, ರಮಣಿ ರವಿ ಬೈಂದೂರು ಅವರಿಂದ ಜಾನಪದ ಗಾಯನ ನಡೆಯಿತು. ಹಿಮ್ಮೇಳದಲ್ಲಿ ರೋಹಿತ್ ಕುಮಾರ್ ಮಲ್ಪೆ, ಸುರೇಶ್ ಲಕ್ಷ್ಮೀನಗರ ಸಹಕರಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!