Wednesday, January 22, 2025
Wednesday, January 22, 2025

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿವೆ

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಿವೆ

Date:

ಉಡುಪಿ, ಫೆ.20: ಸರ್ವಜ್ಞ ಎಂದರೆ ಎಲ್ಲವನ್ನು ಬಲ್ಲವನು ಎನ್ನುವ ಅರ್ಥ ಇದೆ. ಯಾವುದೇ ವಿದ್ಯಾಲಯದಲ್ಲಿ ಪದವಿ ಪಡೆಯದೆ ತನ್ನ ಜೀವನ ಅನುಭವಗಳ ಮೂಲಕ ವಚನಗಳನ್ನು ರಚಿಸಿದ ಕವಿ ಸರ್ವಜ್ಞ, ಸಮಾಜದಲ್ಲಿ ಇದ್ದಂತಹ ಅಂಕು ಡೊಂಕುಗಳ ತಿದ್ದುವ ಕುರಿತು ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ತ್ರಿಪದಿಗಳ ಮೂಲಕ ವಚನಗಳನ್ನು ರಚಿಸಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ರವರು ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಉಡುಪಿ ಜಿಲ್ಲಾ ಕುಲಾಲ ಸಂಘಗಳ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕವಿ ಸರ್ವಜ್ಞ ಜಯಂತಿ ಹಾಗೂ ಸಾಮಾಜಿಕ ನ್ಯಾಯ ದಿನಾಚರಣೆಯ ಕಾರ್ಯಕ್ರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಸರ್ವಜ್ಞರ ತ್ರಿಪದಿಗಳಿಂದ ಪರಿಣಾಮಕಾರಿ ವ್ಯಕ್ತಿತ್ವ ಹೊಂದಲು ಸಾಧ್ಯ. ವಿದ್ಯಾರ್ಥಿನಿಯರು ಸರ್ವಜ್ಞರ ವಿಚಾರಧಾರಣೆಗಳನ್ನು ಜೀವನದಲ್ಲಿ ಆಳವಡಿಸಿಕೊಂಡು ಸ್ವಾವಲಂಬಿ ಸತ್ಪ್ರಜೆಯಾಗಿ ಜೀವನ ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಮಾತನಾಡಿ, ಸಮಾಜದಲ್ಲಿನ ಅನಿಷ್ಟ ಪದ್ಧತಿಗಳನ್ನು ಕೊನೆಗಾಣಿಸಿ ಒಗಟ್ಟು ಮೂಡಿಸುವ ನಿಟ್ಟಿನಲ್ಲಿ ಪ್ರತಿ ವರ್ಷ ಈ ದಿನದಂದು ಸಾಮಾಜಿಕ ನ್ಯಾಯ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಸಮಾಜದಲ್ಲಿನ ಬಡತನ, ಲಿಂಗತಾರತಮ್ಯ, ಅನಕ್ಷರತೆಗಳನ್ನು ಹೋಗಲಾಡಿಸಿ ಸುಸ್ಥಿರ ಅಭಿವೃಧ್ಧಿ ಸಮಾಜವನ್ನು ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಶೇಖರ ಕುಲಾಲ್ ಕವಿ ಸರ್ವಜ್ಞನರ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್ ಅಧ್ಯಕ್ಷತೆ ವಹಿಸಿದ್ದರು. ಅಪರ ಪೋಲಿಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿ ಜಿಲ್ಲಾ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕುಲಾಲ ಸಂಘ (ರಿ) ಪೆರ್ಡೂರಿನ ಅಧ್ಯಕ್ಷರಾದ ಕೃಷ್ಣಪ್ಪ ಕುಲಾಲ್, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ನಿಕೇತನ ರವರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ನಿರೂಪಿಸಿ, ಗಣೇಶ್ ಕುಲಾಲ್ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಮೆರಿಕದಲ್ಲಿ H-1B ವೀಸಾ ಹೊಂದಿರುವವರ ಮಕ್ಕಳಿಗೆ ಹುಟ್ಟಿನಿಂದಲೇ ಪೌರತ್ವವಿಲ್ಲ: ಟ್ರಂಪ್ ಹೊಸ ಆದೇಶ

ನ್ಯೂಯಾರ್ಕ್, ಜ.22: ಅಮೆರಿಕದಲ್ಲಿ ನವಜಾತ ಶಿಶುವಿನ ಕನಿಷ್ಠ ಒಬ್ಬ ಪೋಷಕ ಅಮೆರಿಕನ್...

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!